

ವಿಜಯವಾಣಿ ಸುದ್ದಿಜಾಲ ಧಾರವಾಡ
ಕರ್ನಾಟಕ ಜಾನಪದ ವಿಶ್ವ ವಿದ್ಯಾಲಯದ ಅಕ್ರಮ ನೇಮಕಾತಿ ಪ್ರಕ್ರಿಯೆ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕರ್ನಾಟಕ ರಾಜ್ಯ ಜಾನಪದ ಸ್ನಾತಕೋತ್ತರ ಹಾಗೂ ಸಂಶೋಧಕರ ಒಕ್ಕೂಟದ ಅಧ್ಯಕ್ಷ ಡಾ. ಶಿವಸೋಮಣ್ಣ ನಿಟ್ಟೂರ ಆಗ್ರಹಿಸಿದರು.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾನಪದ ವಿವಿ ಯುಜಿಸಿ ನಿಯಮಾವಳಿಗಳನ್ನು ಗಾಳಿಗೆ ತೂರಿ ನಡೆಸಿದ ಅಕ್ರಮ ನೇಮಕಾತಿಗೆ ಮೇ 29ರಂದು 1 ವರ್ಷವಾಗಲಿದೆ. ಈ ಅವಧಿಯಲ್ಲಿ ಸಾಕಷ್ಟು ಹೋರಾಟ ನಡೆಸಿ ಮುಖ್ಯಮಂತ್ರಿ, ಸಚಿವರು, ಶಾಸಕರು ಸೇರಿ ಸಂಬಂಧಪಟ್ಟವರಿಗೆ ಮನವಿಪತ್ರ ಸಲ್ಲಿಸಲಾಗಿದೆ. ಆದಾಗ್ಯೂ ಯಾವುದೇ ಕ್ರಮವಾಗಿಲ್ಲ. ಹೀಗಾಗಿ ಮೇ 29 ಜನಪದ ವಿವಿಯ ಅಕ್ರಮ ನೇಮಕಾತಿಯ ಕರಾಳ ದಿನವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
54 ಹುದ್ದೆಗಳ ಭತಿರ್ಗೆ ಅಜಿರ್ ಆಹ್ವಾನಿಸಲಾಗಿತ್ತು. ಆದರೆ ಈ ಪೈಕಿ 25 ಹುದ್ದೆಗಳನ್ನು ಅಕ್ರಮವಾಗಿ ಭತಿರ್ ಮಾಡಿಕೊಳ್ಳಲಾಗಿದೆ. ಕುಲಪತಿ, ಕುಲಸಚಿವರ ಸಂಬಂಧಿಗಳು, ಶಿಷ್ಯಂದಿರು ಸೇರಿ ತಮಗೆ ಬೇಕಾದವರನ್ನು ನೇಮಕ ಮಾಡಿಕೊಂಡಿದ್ದಾರೆ. ಅಕ್ರಮಗಳ ತನಿಖೆ ಮಾಡಿಸುವುದಾಗಿ ಭರವಸೆ ನೀಡಿದ್ದ ಸರ್ಕಾರ, ಒಂದು ವರ್ಷವಾದರೂ ಕ್ರಮಕೈಗೊಂಡಿಲ್ಲ ಎಂದು ದೂರಿದರು.
ನೊಂದ ಅಭ್ಯಥಿರ್ಗಳಿಗೆ ನ್ಯಾಯ ಒದಗಿಸುವಲ್ಲಿ ಸರ್ಕಾರ ಸಂರ್ಪೂಣವಾವಿ ವಿಲವಾಗಿದೆ. ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿೆ ಆಗುವಂತೆ ಮಾಡಬೇಕು. ಇಲ್ಲವಾದಲ್ಲಿ ನೊಂದ ಅಭ್ಯಥಿರ್ಗಳು ವಿವಿ ಆವರಣ ಎದುರು ಆಮರಣ ಉಪವಾಸ ಸತ್ಯಾಗ್ರಹ ನಡೆಸಲಾಗವುದು ಎಂದು ಎಚ್ಚರಿಸಿದರು.