

ಆಲೂರು: ಆಲೂರು ತಾಲೂಕಿನ ಕೆಂಚಮ್ಮನ ಹೊಸಕೋಟೆ ಹೋಬಳಿ ವ್ಯಾಪ್ತಿಯ ಹರಿಹಳ್ಳಿ ಗ್ರಾಮದಲ್ಲಿರುವ ಪುರಾಣ ಪ್ರಸಿದ್ಧ ಶ್ರೀ ಕೆಂಚಾಂಬ ದೇವಿಯ ಮೂಲ ದೇವಸ್ಥಾನದಲ್ಲಿ ಲೋಕಕಲ್ಯಾಣಕ್ಕಾಗಿ ಕೃತ್ತಿಕೋತ್ಸವ ಭಾನುವಾರ ವಿಜೃಂಭಣೆಯಿಂದ ನಡೆಯಿತು.
ದೇವಸ್ಥಾನದ ಪ್ರಧಾನ ಅರ್ಚಕ ರಾಮಸ್ವಾಮಿ ನೇತೃತ್ವದಲ್ಲಿ ಅಭಿಷೇಕ, ಅರ್ಚನೆ ನಡೆದವು. ಕೆಂಚಾಂಬ ದೇವಿಗೆ ವಿಶೇಷವಾಗಿ ಅಲಂಕರಿಸಲಾಗಿತ್ತು. ಸಂಜೆ ದೇವಿಗೆ ಮಹಾಮಂಗಳಾರತಿ ಕಾರ್ಯ ನಡೆಸಲಾಯಿತು. ಶಾಸಕ ಸಿಮೆಂಟ್ ಮಂಜು ಭೇಟಿ ನೀಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ದೇವಾಲಯ ಅಭಿವೃದ್ಧಿ ಕಾರ್ಯದ ಬಗ್ಗೆ ಸ್ಥಳೀಯ ಮುಖಂಡರ ಜತೆ ಚರ್ಚಿಸಿದರು.