ಸಂಭ್ರಮದ ಕಳಸಾರೋಹಣ

IMG20250207205458.jpg
Published on

ಬೆಳಗಾವಿ: ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾದ ಗ್ರಾಮದೇವತೆ ಲಕ್ಷ್ಮೀ ದೇವಸ್ಥಾನದ ವಾಸ್ತುಶಾಂತಿ, ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಕಾರ್ಯಕ್ರಮ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.

ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಗಿರಿಜಾ ಹಟ್ಟಿಹೊಳಿ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಗ್ರಾಮದೇವಿ ದೇವಸ್ಥಾನ ಉದ್ಘಾಟಿಸಿದರು.

ವೇದಮೂರ್ತಿ ರಾಚಯ್ಯ ಸಾನ್ನಿಧ್ಯ ವಹಿಸಿದ್ದರು. ಬಿಳಕಿ ರುದ್ರಮಠದ ಚನ್ನಬಸವ ದೇವರು ನೇತೃತ್ವ ವಹಿಸಿದ್ದರು. ಮೃಣಾಲ್ ಹೆಬ್ಬಾಳ್ಕರ್, ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರು, ಗ್ರಾಮದ ಹಿರಿಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net