ಡೆತ್​ನೋಟ್​ ಬರೆದಿಟ್ಟು ಉಪನ್ಯಾಸಕಿ ಆತ್ಮಹತ್ಯೆ: ಹುಟ್ಟು ಹಬ್ಬದ ದಿನವೇ ದುರಂತ ಅಂತ್ಯ

New Project(6)
Published on

ಚಾಮರಾಜನಗರ: ಕಾಲೇಜು ಉಪನ್ಯಾಸಕಿಯೊಬ್ಬರು ಹಾಸ್ಟೆಲ್​ನಲ್ಲಿ ನೇಣುಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ಸಂಭವಿಸಿದೆ. ಸಾವಿಗೂ ಮುನ್ನ ಬರೆದ ಡೆತ್‌ನೋಟ್ ಸಿಕ್ಕಿದೆ.

ಚಂದನಾ(26) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಯಳಂದೂರು ತಾಲೂಕಿನ ಅಂಬಳೆ ಗ್ರಾಮದ ಚಂದನಾ, ಚಾಮರಾಜನಗರದ ಜೆಎಸ್‌ಎಸ್‌ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇಂದು(ಆ.9) ಅವರ ಬರ್ತ್​ ಡೇ. ಈ ದಿನವೇ ಜೆಎಸ್‌ಎಸ್ ಕಾಲೇಜಿನ ಹಾಸ್ಟೆಲ್​ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಡೆತ್​ನೋಟ್​ ಪತ್ತಯಾಗಿದ್ದು, 'ನನ್ನ ಸಾವಿಗೆ ನಾನೇ ಕಾರಣ' ಎಂದು ಬರೆಯಲಾಗಿದೆ. ಚಾಮರಾಜನಗರ ಪಟ್ಟಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net