ಮಾರ್ಗೋನಹಳ್ಳಿಯಲ್ಲಿ ಗಮನ ಸೆಳೆದ ಮಕ್ಕಳ ಸಂತೆ

14-kkr2(1-24
ಕಿಕ್ಕೇರಿ ಹೋಬಳಿಯ ಮಾರ್ಗೋನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಸಂತೆ ನಡೆಯಿತು. ಶ್ರೀಕಾಂತರಾಜೇ ಅರಸ್, ರೋಜಾ, ಪುಟ್ಟೇಗೌಡ, ಮಂಜುನಾಥ್, ನಾಗರಾಜು, ಸವಿತಾ ಇದ್ದರು.
Published on

ಕಿಕ್ಕೇರಿ: ಹೋಬಳಿಯ ಮಾರ್ಗೋನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ ಮಕ್ಕಳ ಸಂತೆಯಲ್ಲಿ ಮಕ್ಕಳು ವ್ಯಾಪಾರ ವಹಿವಾಟು ಮಾಡಿ ಸಂಭ್ರಮಿಸಿದರು.

ಪಠ್ಯ ಕಲಿಕೆಗೂ ಸೈ, ಪಠ್ಯೇತರ ಚಟುವಟಿಕೆಗೂ ಸೈ ಎನ್ನುವಂತೆ ಮಕ್ಕಳು ಲವಲವಿಕೆಯಿಂದ ಭಾಗವಹಿಸಿದ್ದರು. ಮನೆಯಿಂದಲೇ ಮಕ್ಕಳು ಬೋಂಡಾ, ವಡೆ, ಚಕ್ಕುಲಿ, ನಿಪ್ಪಟ್ಟು ಮಾಡಿಸಿಕೊಂಡು ಆಗಮಿಸಿದ್ದರು. ಕೋಸು, ಬದನೆ, ತೆಂಗಿನಕಾಯಿ, ಪಪ್ಪಾಯಿ, ಕೊತ್ತಂಬರಿ, ವಿವಿಧ ತರಕಾರಿ, ಸೊಪ್ಪು ತಂದಿದ್ದರು. ಎಲ್ಲವನ್ನು ಅಚ್ಚುಕಟ್ಟಾಗಿ ಒಂದೆಡೆ ಜೋಡಿಸಿ ವ್ಯಾಪಾರಕ್ಕೆ ಇಳಿದರು.

ಚೌಕಾಸಿ ವ್ಯಾಪಾರಕ್ಕೆ ಇಳಿದು ವ್ಯಾಪಾರ ಮಾಡಿದರು. ತೂಕದ ಯಂತ್ರದಲ್ಲಿ ಕರಾರುವಕ್ಕಾಗಿ ಮಾರಾಟ ವಸ್ತುಗಳನ್ನು ತೂಗಿದರು. ಒಂದಕ್ಕೆ ಒಂದು ಉಚಿತ ಎಂದು ಹಲವರು ಗಿರಾಕಿ ಸೆಳೆಯಲು ವ್ಯಾಪಾರ ತಂತ್ರ ಬಳಸಿದರು. ಇದರೊಂದಿಗೆ ಪರಿಸರ ಸ್ನೇಹಿ ಬ್ಯಾಗ್‌ಗಳ ಬಗ್ಗೆ ಅರಿವು ಮೂಡಿಸಿದರು.

ಸಿಆರ್‌ಪಿ ಶ್ರೀಕಾಂತರಾಜೇ ಅರಸ್, ಎಸ್‌ಡಿಎಂಸಿ ಅಧ್ಯಕ್ಷೆ ರೋಜಾ, ಮುಖ್ಯ ಶಿಕ್ಷಕಿ ಸವಿತಾ, ಗ್ರಾಪಂ ಮಾಜಿ ಉಪಾಧ್ಯಕ್ಷ ಪುಟ್ಟೇಗೌಡ, ಮುಖಂಡರಾದ ಎಂ.ಕೆ. ನಾಗರಾಜು, ಲಕ್ಕಣ್ಣ, ಗಿರೀಶ್, ಶ್ರೀನಿವಾಸ್, ರಮೇಶ್, ಕಾಳೇಗೌಡ, ಶಿವಣ್ಣ, ರಾಜಣ್ಣ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net