ಉತ್ತಮ ಆರೋಗ್ಯಕ್ಕೆ ಸ್ವಚ್ಛ ಪರಿಸರ ಅಗತ್ಯ

17sirsi1 SWACHHATA ABHIYANA
Published on

ಶಿರಸಿ: ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಸ್ವಚ್ಛ ಭಾರತ ಅಭಿಯಾನ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಸ್ವಚ್ಛತೆಯ ಸೇವೆ 2024ರಡಿ ‘ಸ್ವಭಾವ ಸ್ವಚ್ಛತೆ ಸಂಸ್ಕಾರ ಸ್ವಚ್ಛತೆ’ ಕಾರ್ಯಕ್ರಮಕ್ಕೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಂಗಳವಾರ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಭಾರತ ದೇಶ ಈಗ ಅಭಿವೃದ್ಧಿಯತ್ತ ದಾಪುಗಾಲು ಹಾಕಿದೆ. ಪ್ರತಿ ವ್ಯಕ್ತಿಯೂ ಆರ್ಥಿಕವಾಗಿ ಸಶಕ್ತನಾಗಬೇಕು ಎಂಬುದು ಮೋದಿಯವರ ಕನಸು. ಅದೇ ರೀತಿ ಆರೋಗ್ಯ ಕಾಪಾಡಿಕೊಳ್ಳುವತ್ತ ಪ್ರತಿಯೊಬ್ಬರೂ ಗಮನ ಹರಿಸಬೇಕು. ಉತ್ತಮ ಆರೋಗ್ಯಕ್ಕೆ ಸ್ವಚ್ಛ ಪರಿಸರ ಅಗತ್ಯ. ನಮ್ಮ ಸುತ್ತಲಿನ ವಾತಾವರಣ ಶುಭ್ರವಾಗಿಟ್ಟುಕೊಳ್ಳಬೇಕು ಎಂದರು.

ಶಿರಸಿ ನಗರದ ಕೆಲವು ಸ್ಥಳಗಳಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಸೇರಿ ಕಸ ಸ್ವಚ್ಛಗೊಳಿಸುವ ಮೂಲಕ ವಿಶ್ವೇಶ್ವರ ಹೆಗಡೆ ಕಾಗೇರಿ ಚಾಲನೆ ನೀಡಿದರು. ನಗರ ಮಂಡಲ ಅಧ್ಯಕ್ಷ ಆನಂದ ಸಾಲೇರ್, ಪ್ರಧಾನ ಕಾರ್ಯದರ್ಶಿ ಹಾಗೂ ಸೇವಾ ಪ್ರಾಕ್ಷಿಕ ಸಂಚಾಲಕ ನಾಗರಾಜ ನಾಯ್ಕ, ಸಹ ಸಂಚಾಲಕ ವಿಜಯ ಶೆಟ್ಟಿ, ಮಹಾಂತೇಶ ಹಾದಿಮನಿ, ನಗರಸಭೆ ಅಧ್ಯಕ್ಷೆ ಶರ್ವಿುಳಾ ಮಾದನಗೇರಿ, ಉಪಾಧ್ಯಕ್ಷ ರಮಾಕಾಂತ ಭಟ್, ನಂದನ ಸಾಗರ್, ಶ್ರೀಕಾಂತ ನಾಯ್ಕ, ನಾಗೇಶ, ರವಿ ಶೆಟ್ಟಿ, ವೀಣಾ ಶೆಟ್ಟಿ, ನಗರಸಭೆ ಸದಸ್ಯರು ಹಾಗೂ ಪಕ್ಷದ ಕಾರ್ಯಕರ್ತರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net