

ಕೋಟ: ಅಟಲ್ ಬಿಹಾರಿ ವಾಜಪೇಯಿ ಅವರು ಸಮಾಜ ಮತ್ತು ರಾಜಕಾರಣಕ್ಕೆ ಆದರ್ಶ ಬದುಕಿನ ಮಾರ್ಗ ತೋರಿಸಿಕೊಟ್ಟವರು. ಸಚ್ಚಾರಿತ್ರೃ ರಾಜಕಾರಣಕ್ಕೆ ಸ್ಪಷ್ಟ ನಿದರ್ಶನವಾಗಿ ಬಾಳಿ ಬದುಕಿದ ಅವರ 100ನೇ ಜನ್ಮದಿನೋತ್ಸವ ಭಾರತದ ಕೋಟ್ಯಂತರ ಬಿಜೆಪಿ ಕಾರ್ಯಕರ್ತರಲ್ಲಿ ಹೊಸ ಜಾಗೃತಿ ಉಂಟುಮಾಡುತ್ತಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಬಿಜೆಪಿ ಕೋಟ ಮತ್ತು ಕೋಟತಟ್ಟು ಶಕ್ತಿಕೇಂದ್ರ ವತಿಯಿಂದ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನಾಚರಣೆಯಲ್ಲಿ ಮಾತನಾಡಿದರು.
ಶಾಸಕ ಕಿರಣ್ ಕುಮಾರ್ ಕೊಡ್ಗಿ, ಚಿಂತಕ ಪ್ರಕಾಶ್ ಮಲ್ಪೆ, ಕೋಟ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಸುರೇಶ್ ಕುಂದರ್, ಪ್ರಧಾನ ಕಾರ್ಯದರ್ಶಿ ಅಜಿತ್ ಶೆಟ್ಟಿ ಕೊತ್ತಾಡಿ, ಕೋಟತಟ್ಟು ಗ್ರಾಪಂ ಅಧ್ಯಕ್ಷ ಸತೀಶ್ ಕುಂದರ್ ಬಾರಿಕೆರೆ, ವಡ್ದರ್ಸೆ ಪಂಚಾಯಿತಿ ಅಧ್ಯಕ್ಷ ಲೋಕೇಶ್ ಕಾಂಚನ್, ಹಿರಿಯರಾದ ಸುರೇಂದ್ರ ಹೆಗ್ಡೆ, ಕೋಟತಟ್ಟು ಶಕ್ತಿಕೇಂದ್ರ ಅಧ್ಯಕ್ಷ ಪ್ರಮೋದ್ ಹಂದೆ, ಕೋಟ ಶಕ್ತಿಕೇಂದ್ರ ಅಧ್ಯಕ್ಷ ಅಜಿತ್ ದೇವಾಡಿಗ ಮೊದಲಾದವರು ಉಪಸ್ಥಿತರಿದ್ದರು.