ಬಜೆಟ್​ನಲ್ಲಿ ಹಾವೇರಿಗೆ ವಿಶೇಷ ಕಾಳಜಿ! ತವರಿನ ಋಣ ತೀರಿಸಲು ಯತ್ನಿಸಿದ ಸಿಎಂ ಬೊಮ್ಮಾಯಿ

bommai
Published on

ಬೆಂಗಳೂರು: ಚೊಚ್ಚಲ ಬಜೆಟ್​ನಲ್ಲೇ ಸಿಎಂ ಬಸವರಾಜ ಬೊಮ್ಮಾಯಿ ಅವರು ತವರು ಜಿಲ್ಲೆ ಹಾವೇರಿಗೆ ಬಹುತೇಕ ಎಲ್ಲ ಇಲಾಖೆಗೂ ವಿಶೇಷ ಆದ್ಯತೆ ಕೊಟ್ಟಿದ್ದಾರೆ. ಆ ಮೂಲಕ ಸಿಎಂ ಜಿಲ್ಲೆಯ ಋಣ ತೀರಿಸಲು ಯತ್ನಿಸಿದ್ದಾರೆ.

  • ಹಾವೇರಿಯಲ್ಲಿ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 20 ಕೋಟಿ ರೂ. ಅನುದಾನ
  • ಹಾವೇರಿ ಆಸ್ಪತ್ರೆ ಮೇಲ್ದರ್ಜೆಗೆ
  • ಹಾವೇರಿ ಜಿಲ್ಲೆಯಲ್ಲಿ ಹೈಟೆಕ್ ಸರ್ಕಾರಿ ರೇಷ್ಮೆಗೂಡು ಮಾರುಕಟ್ಟೆ ನಿರ್ಮಾಣ
  • ಚೆನ್ನೈ-ಬೆಂಗಳೂರು-ಮುಂಬೈ ಕಾರಿಡಾರ್ ವ್ಯಾಪ್ತಿಯಲ್ಲಿ ಬರುವ ಹಾವೇರಿಯಲ್ಲಿ ಕೈಗಾರಿಕೆ ಸ್ಥಾಪಿಸಲು ಉತ್ತೇಜನ
  • ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನಲ್ಲಿ ನೂತನ ಜವಳಿ ಪಾರ್ಕ್‍ ನಿರ್ಮಾಣ, ಸಾವಿರಾರು ಉದ್ಯೋಗ ಸೃಷ್ಟಿ
  • ಹಾವೇರಿ ಜಿಲ್ಲೆಯಲ್ಲಿ ಒಂದು ಲಕ್ಷ ಲೀಟರ್ ಸಾಮರ್ಥ್ಯದ ಮೆಗಾ ಡೇರಿ ಸ್ಥಾಪನೆ
  • 'ಮುಖ್ಯಮಂತ್ರಿ ಆರೋಗ್ಯ ವಾಹಿನಿ' ಎಂಬ ಹೊಸ ಯೋಜನೆಯಡಿ ಹಾವೇರಿ ಜಿಲ್ಲೆಯಲ್ಲಿ ಸಂಚಾರಿ ಕ್ಲಿನಿಕ್​ ಸ್ಥಾಪನೆ
  • ಶೈಕ್ಷಣಿಕವಾಗಿ ಹಿಂದುಳಿದ ಪ್ರದೇಶಗಳಲ್ಲಿ ಹಾವೇರಿಯಲ್ಲಿ ವಿನೂತನ ಮಾದರಿ ವಿಶ್ವವಿದ್ಯಾಲಯ ಸ್ಥಾಪನೆ. ಇದು ಸಾಂಪ್ರದಾಯಿಕ ವಿಶ್ವವಿದ್ಯಾಲಯಗಳಿಗಿಂತ ಭಿನ್ನವಾಗಿ ತಂತ್ರಜ್ಞಾನದ ಬಳಕೆಯೊಂದಿಗೆ ಕಾರ್ಯನಿರ್ವಹಿಸಲಿದೆ
  • ಸವಣೂರಿನಲ್ಲಿ ಹೊಸ ಆಯುರ್ವೇದ ಕಾಲೇಜು​ ಸ್ಥಾಪನೆ
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net