ನನ್ನ ಆರೋಗ್ಯ ಚೆನ್ನಾಗಿದೆ, ಯಾರೂ ಆತಂಕ ಪಡಬೇಡಿ: ಸಿಎಂ ಯಡಿಯೂರಪ್ಪ

BSY
Published on

ಬೆಳಗಾವಿ: ಲೋಕಸಭಾ ಉಪ ಚುನಾವಣೆ ಮೂರು ಪಕ್ಷಕ್ಕೆ ಪ್ರತಿಷ್ಠೆಯ ಅಖಾಡವಾಗಿದ್ದು, ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅವರನ್ನ ಶತಾಯಗತಾಯ ಗೆಲ್ಲಿಸಿಕೊಳ್ಳಲೇಬೇಕೆಂದು ಪಣತೊಟ್ಟಿರುವ ಸಿಎಂ ಬಿ.ಎಸ್​. ಯಡಿಯೂರಪ್ಪ ಅವರೇ ಬಿರುಬಿಸಿಲನ್ನೂ ಲೆಕ್ಕಿಸದೆ ಗುರುವಾರ ಭರ್ಜರಿ ಪ್ರಚಾರ ನಡೆಸಿದ್ದಾರೆ.

ಈ ವೇಳೆ ಸಿಎಂ ಆರೋಗ್ಯದಲ್ಲಿ ಏರುಪೇರಾಗಿದೆ ಎಂಬ ಸುದ್ದಿ ಹರಿದಾಡಿತ್ತು. ಈ ಕುರಿತು ಪ್ರತಿಕ್ರಿಯಿಸಿರುವ ಸಿಎಂ, ನನ್ನ ಆರೋಗ್ಯ ಚೆನ್ನಾಗಿದ್ದು, ಯಾವುದೇ ಏರುಪೇರು ಉಂಟಾಗಿಲ್ಲ. ಜನರು ಈ ಬಗ್ಗೆ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದಿದ್ದಾರೆ.

ಗುರುವಾರ ಬೆಳಗ್ಗೆ ಬೆಳಗಾವಿಯಲ್ಲಿ ತೆರೆದ ವಾಹನದಲ್ಲಿ ರೋಡ್ ಶೋ ನಡೆಸಿದ ಸಿಎಂ ಯಡಿಯೂರಪ್ಪ, ಖಾಸಗಿ ಹೋಟೆಲ್​ನಲ್ಲಿ ಕೆಲ ಕಾಲ ವಿಶ್ರಾಂತಿ ಪಡೆದರು. ಉಪಚುನಾವಣೆ ಪ್ರಚಾರಕ್ಕೂ ಮುನ್ನ ನಾಗನೂರು ರುದ್ರಾಕ್ಷಿ ಮಠಕ್ಕೆ ಭೇಟಿ ನೀಡಿದ ಬಳಿಕ ಹುಕ್ಕೇರಿ ಮಠಕ್ಕೆ ಭೇಟಿ ನೀಡಿ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳ ಜತೆಗೆ ಮಾತುಕತೆ ನಡೆಸಿದರು. ಸಚಿವ ಜಗದೀಶ್ ಶೆಟ್ಟರ್, ಸಚಿವ ಮುರಗೇಶ್ ನಿರಾಣಿ ಸಾಥ್ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net