ಸಿದ್ಧಗಂಗಾ ಶ್ರೀಗಳ ಜತೆ ಸಿಎಂ ಯಡಿಯೂರಪ್ಪ ಗೌಪ್ಯ ಚರ್ಚೆ! ರಾಜಕೀಯ ವಲಯದಲ್ಲಿ ಭಾರಿ ಸಂಚಲನ

bsy
Published on

ತುಮಕೂರು: ಕರೊನಾ ಪ್ರಗತಿ ಪರಿಶೀಲನೆ ನೆಪದಲ್ಲಿ ತುಮಕೂರಿಗೆ ಇಂದು(ಶುಕ್ರವಾರ) ಭೇಟಿ ನೀಡಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪ ಸಿದ್ಧಗಂಗಾ ಮಠಕ್ಕೆ ತೆರಳಿ ಮಠಾಧ್ಯಕ್ಷ ಸಿದ್ದಲಿಂಗ ಶ್ರೀಗಳ ಜತೆ ಅರ್ಧಗಂಟೆಗೂ ಹೆಚ್ಚು ಕಾಲ ಗೌಪ್ಯ ಚರ್ಚೆ ನಡೆಸಿದರು. ಪಕ್ಷದೊಳಗೆ ಬಂಡಾಯದ ಹೊಗೆಯಾಡುತ್ತಿರುವ ಈ ಸಂದರ್ಭದಲ್ಲಿ ಸಿಎಂ ಭೇಟಿ ರಾಜಕೀಯ ಮಹತ್ವ ಪಡೆದುಕೊಂಡಿದೆ.

ಶ್ರೀಮಠದ ಕೋವಿಡ್ ಕೇರ್ ಸೆಂಟರ್‌ಗೆ ಭೇಟಿ ನೀಡಿದ ಬಳಿಕ ಡಿಸಿಎಂ ಅಶ್ವತ್ಥನಾರಾಯಣ್ ಜತೆ ಮಠಕ್ಕೆ ನೇರವಾಗಿ ತೆರಳಿದ ಬಿಎಸ್‌ವೈ, ಶ್ರೀಗಳ ಜತೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ಡಿಸಿ, ಎಸ್ಪಿ ಸೇರಿದಂತೆ ಯಾರೊಬ್ಬರಿಗೂ ಶ್ರೀಮಠಕ್ಕೆ ಪ್ರವೇಶವಿರಲಿಲ್ಲ. ಜಿಲ್ಲೆಯ ಯಾವೊಬ್ಬ ಜನಪ್ರತಿನಿಧಿಯೂ ಇರಲಿಲ್ಲ. ಇದನ್ನೂ ಓದಿರಿ ನೀನು ಪವರ್‌ಫುಲ್​ ಸಂಸದ, ತಾಕತ್ತಿದ್ರೆ ರೋಹಿಣಿ ಸಿಂಧೂರಿಯನ್ನ ವರ್ಗಾವಣೆ ಮಾಡಿಸು…

ಆಡಳಿತಾರೂಢ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ವಿಚಾರ ಮುನ್ನೆಲೆಗೆ ಬಂದಿರುವ ಬೆನ್ನಹಿಂದೆಯೇ ಬಿಎಸ್‌ವೈ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಈ ಹಿಂದೆ ಹಲವು ಬಾರಿ ಪ್ರಮುಖ ರಾಜಕೀಯ ನಿರ್ಧಾರ ತೆಗೆದುಕೊಳ್ಳುವ ಮುನ್ನ ಬಿಎಸ್‌ವೈ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿರುವುದು ಇತಿಹಾಸದ ಪುಟದಲ್ಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net