ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ

fire in tree
Published on

ಸಂಶಿ: ಮುಂಗಾರು ಮಳೆಯ ಆರ್ಭಟ ಜೋರಾಗಿದ್ದು, ಮಧ್ಯಾಹ್ನ ಗುಡುಗು ಮತ್ತು ಸಿಡಿಲಿನ ಹೊಡೆತಕ್ಕೆ ಸಂಶಿ ಸಮೀಪದ ಯರೇಬೂದಿಹಾಳ ಗ್ರಾಮದಲ್ಲಿ ತೆಂಗಿನ ಮರಕ್ಕೆ ಸಿಡಿಲು ಬಡಿದು ಹೊತ್ತಿ ಉರಿದಿದೆ.

ಮನೆ ಮಾಳಿಗೆ ಏರಿದ ರೈತ ನೀರು ಎರಚಿ ಮರಕ್ಕೆ ಹೊತ್ತಿಕೊಂಡ ಬೆಂಕಿಯನ್ನು ನಂದಿಸಿದರು.

ಮಧ್ಯಾಹ್ನ ಗುಡುಗು, ಸಿಡಿಲಿನೊಂದಿಗೆ ಮಳೆ ಅಬ್ಬರಿಸಿತು. ಕಳೆದೆರಡು ದಿನಗಳಲ್ಲಿ ಉಷ್ಣಾಂಶದಲ್ಲಿ ಏರಿಕೆಯಾಗುತ್ತಿದ್ದು, ಬಿಸಿಲಿನ ತಾಪಕ್ಕೆ ಜನ ಹೈರಾಣಾಗಿದ್ದರು. ಇಂದು ಸುರಿದ ಮಳೆ ವಾತಾವರಣವನ್ನು ತಂಪಾಗಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net