

ಹುಬ್ಬಳ್ಳಿ: ಮಾಜಿ ಶಾಸಕ ಮಧು ಬಂಗಾರಪ್ಪ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು.
ಹುಬ್ಬಳ್ಳಿಯ ಗೋಕುಲ ಗಾರ್ಡನ್ನಲ್ಲಿ ಶುಕ್ರವಾರ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಧು ಬಂಗಾರಪ್ಪಗೆ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ನೇತೃತ್ವದ ತಂಡ ಪಕ್ಷದ ಬಾವುಟ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡಿರು. ಮಧು ಬಂಗಾರಪ್ಪ ಜತೆ ಜೆಡಿಎಸ್ನ ಹಲವು ಮುಖಂಡರು ಕೈ ಸೇರ್ಪಡೆಯಾದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ, ಸಲೀಮ್ ಅಹ್ಮದ್, ಈಶ್ವರ್ ಖಂಡ್ರೆ ಮತ್ತಿತರ ನಾಯಕರು ಉಪಸ್ಥಿತರಿದ್ದರು.
ಲೋಕಸಭಾ ಚುನಾವಣಾ ಸೋಲಿನ ಬಳಿಕ ಜೆಡಿಎಸ್ ಚಟುವಟಿಕೆಯಲ್ಲಿ ಸಕ್ರಿಯವಾಗಿ ಕಾಣಿಸಿಕೊಳ್ಳದ ಮಧು ಬಂಗಾರಪ್ಪ, ಕಾರ್ಯಕರ್ತರ ವಿಶ್ವಾಸವನ್ನು ಜೆಡಿಎಸ್ ಕಳೆದುಕೊಂಡಿದೆ ಎಂದು ಕಳೆದ ವರ್ಷ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದರು. ಇದೀಗ ಜೆಡಿಎಸ್ ತೊರೆದು ಕಾಂಗ್ರೆಸ್ ಮನೆಗೆ ಕಾಲಿಟ್ಟಿದ್ದಾರೆ.