ಕಾಂಗ್ರೆಸ್​ ಹಿರಿಯ ನಾಯಕ ಜಯಚಂದ್ರಗೆ ಟಿಕೆಟ್ ಸಿಗಲ್ವಾ? ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಮಾತಾಡಿದ ಸಿದ್ದು

tb jayachandra
Published on

ತುಮಕೂರು: ಕಾಂಗ್ರೆಸ್​ನ ಹಿರಿಯ ನಾಯಕ ಟಿ.ಬಿ.ಜಯಚಂದ್ರ ಅವರಿಗೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್​ ಸಿಗಲ್ವಾ? ಇಂತಹದ್ದೊಂದು ಪ್ರಶ್ನೆಯನ್ನು ಹುಟ್ಟುಹಾಕಿಸಿದೆ ಮಾಜಿ ಸಿಎಂ ಸಿದ್ದರಾಮಯ್ಯರ ಹೇಳಿಕೆ

ಟಿ.ಬಿ.ಜಯಚಂದ್ರಗೆ ಟಿಕೆಟ್ ನೀಡೊದು, ಬಿಡೋದು ಹೈಕಮಾಂಡ್​ನ ತೀರ್ಮಾನಕ್ಕೆ ಬಿಟ್ಟದ್ದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಇದು ರಾಜಕೀಯ ವಲಯದಲ್ಲಿ ತರೇಹವಾರಿ ಚರ್ಚೆಗೆ ನಾಂದಿಯಾಗಿದೆ.

ಶಿರಾದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಸಿದ್ದರಾಮಯ್ಯ, ಶಿರಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಹಂಚಿಕೆ ವಿಚಾರದ ಕುರಿತು ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಉತ್ತರಿಸಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯೂ ಆದ ಕಾಡುಗೊಲ್ಲ ಸಮುದಾಯದ ಡಾ.ಸಾಸಲು ಸತೀಶ್ ಕೂಡ ಕ್ಷೇತ್ರದಲ್ಲಿ ಅಹಿಂದ ಹೆಸರಿನಲ್ಲಿ ಓಡಾಟ ಆರಂಭಿಸಿದ್ದು, ಸಿದ್ದರಾಮಯ್ಯ ಯಾರ ಪರ ಒಲವು ತೋರಲಿದ್ದಾರೆ ಎಂಬ ಕುತೂಹಲ ಮುಂದುವರಿದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net