

ವಿಜಯವಾಣಿ ಸುದ್ದಿಜಾಲ ಧಾರವಾಡ
ನವದೆಹಲಿಯ ಕೇಂದ್ರ ಸಾಹಿತ್ಯ ಅಕಾಡೆಮಿ ಹಾಗೂ ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಹಯೋಗದೊಂದಿಗೆ ಲೇಖಕರೊಂದಿಗೆ ಭೇಟಿ ಕಾರ್ಯಕ್ರಮವನ್ನು ಸೆ. 29ರಂದು ಬೆಳಗ್ಗೆ 10 ಗಂಟೆಗೆ ಸಂಘದ ರಾ.ಹ. ದೇಶಪಾಂಡೆ ಸಭಾಭವನದಲ್ಲಿ ಆಯೋಜಿಸಲಾಗಿದೆ. ಹಿರಿಯ ಸಾಹಿತಿ ಪ್ರೊ. ಮಾಲತಿ ಪಟ್ಟಣಶೆಟ್ಟಿ ಅವರು ತಮ್ಮ ಜೀವನ, ಸಾಹಿತ್ಯ ಹಾಗೂ ಬರವಣಿಗೆ ಕುರಿತು ವಿಚಾರ ಸಂವಾದ ನಡೆಸುವರು. ಸಂಗೀತ ಕಲಾವಿದೆ ಸುಜಾತಾ ಗುರವ ಕಮ್ಮಾರ ಅವರು ಮಾಲತಿ ಪಟ್ಟಣಶೆಟ್ಟಿ ರಚಿತ ಭಾವಗೀತೆಗಳನ್ನು ಪ್ರಸ್ತುತಪಡಿಸುವರು. ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ, ಪದಾಽಕಾರಿಗಳು ಉಪಸ್ಥಿತರಿರುವರು ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಕನ್ನಡ ಸಲಹಾ ಸಮಿತಿ ಸದಸ್ಯ ಚನ್ನಪ್ಪ ಅಂಗಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.