

ಬೆಂಗಳೂರು: ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ ಎಸಿಬಿ(ಭ್ರಷ್ಟಾಚಾರ ನಿಗ್ರಹ ದಳ) ಕಚೇರಿಯಲ್ಲೂ ಕರೊನಾ ಸ್ಫೋಟಗೊಂಡಿದ್ದು, ಅಧಿಕಾರಿಗಳು ಮತ್ತು ಸಿಬ್ಬಂದಿ ಸೇರಿ 15 ಮಂದಿಗೆ ಸೋಂಕು ತಗುಲಿದೆ.
ಕೋವಿಡ್ ಸೋಂಕಿತ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಕಚೇರಿಯನ್ನು ಸ್ಯಾನಿಟೈಸ್ ಮಾಡಲಾಗುತ್ತಿದೆ. ಕಚೇರಿಯ ಉಳಿದವರಿಗೂ ಕೋವಿಡ್ ಟೆಸ್ಟ್ ಮಾಡಿಸಲು ಹಿರಿಯ ಅಧಿಕಾರಿಗಳು ಸೂಚನೆ ಕೊಟ್ಟಿದ್ದಾರೆ. ಸೋಂಕು ಕಂಡುಬಂದವರಲ್ಲಿ ಸೌಮ್ಯ ಲಕ್ಷಣಗಳು ಗೋಚರಿಸಿವೆ. ಮಂಗಳವಾರ ಸಿಸಿಬಿ ಕಚೇರಿಯಲ್ಲಿ 17 ಸಿಬ್ಬಂದಿಗೆ ಕರೊನಾ ಪಾಸಿಟಿವ್ ಬಂದಿತ್ತು.