

ನಾಗಮಂಗಲ: ಆದಿಚುಂಚನಗಿರಿ ನರ್ಸಿಂಗ್ ಕಾಲೇಜಿನ ಕೋಲ್ಕತ ಮೂಲದ ನಾಲ್ವರು ವಿದ್ಯಾರ್ಥಿಗಳು ಮತ್ತು ಆದಿಚುಂಚನಗಿರಿ ಆಸ್ಪತ್ರೆಯ ಸರ್ಜನ್ ಹಾಗೂ ಬೆಳ್ಳೂರು ಸಮುದಾಯ ಆರೋಗ್ಯ ಕೇಂದ್ರದ ವೈದ್ಯರು ಸೇರಿ 6 ಮಂದಿಗೆ ಕರೊನಾ ಸೋಂಕು ದೃಢಪಟ್ಟಿದೆ.
ಡಿ.20ರಂದು ಕೋಲ್ಕತದಿಂದ 67 ವಿದ್ಯಾರ್ಥಿಗಳು ಮಂಡ್ಯ ಜಿಲ್ಲೆ ನಾಗಮಂಗಲದ ಬಿಜಿ ನಗರಕ್ಕೆ ಆಗಮಿಸಿದ್ದರು. ನೆಗೆಟಿವ್ ವರದಿ ಇದ್ದುದ್ದರಿಂದ 7 ದಿನ ಕಾಲ ಹೋಂ ಕ್ವಾರಂಟೈನ್ನಲ್ಲಿ ಇಡಲಾಗಿತ್ತು. ನಂತರ ಕೋವಿಡ್ ಪರೀಕ್ಷೆ ನಡೆಸಿದಾಗ ನಾಲ್ವರಿಗೆ ಸೋಂಕು ದೃಢಪಟ್ಟಿದೆ. ನಾಲ್ವರು ಸೋಂಕಿತರಿಗೂ ಆದಿಚುಂಚನಗಿರಿ ಆಸ್ಪತ್ರೆಯ ಕೋವಿಡ್ ಕೇರ್ ಸೆಂಟರ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದೇಶದೆಲ್ಲೆಡೆ ಒಮಿಕ್ರಾನ್ ವೈರಸ್ ಅಬ್ಬರ ಹೆಚ್ಚಾಗುತ್ತಿದ್ದಂತೆ ಹೊರ ರಾಜ್ಯದಿಂದ ಬಂದಿರುವರಲ್ಲಿ ಕೋವಿಡ್ ಸೋಂಕು ಇರುವುದು ಆತಂಕ ಮೂಡಿಸಿದೆ.