ಜಮೀರ್​ ಅಹ್ಮದ್​ಗೆ ಕರೊನಾ ಪಾಸಿಟಿವ್​

Jameer Ahmad Khan
Published on

ಬೆಂಗಳೂರು: ಮಹಾಮಾರಿ ಕರೊನಾ ದಿನೇದಿನೆ ಉಲ್ಬಣಿಸುತ್ತಿದ್ದು, ಸೋಂಕಿತರ ಸಂಖ್ಯೆ ನಾಗಾಲೋಟದಲ್ಲಿ ಏರಿಕೆಯಾಗುತ್ತಿದೆ. ದೇಶದ ಪ್ರಮುಖ ಗಣ್ಯರಾದಿಯಾಗಿ ಸಾಮಾನ್ಯ ಜನರನ್ನೂ ಕರೊನಾ ಕಾಡುತ್ತಿದೆ. ಇದೀಗ ಚಾಮೆರಾಜಪೇಟೆ ಶಾಸಕ ಬಿ.ಝಡ್​. ಜಮೀರ್​ ಅಹ್ಮದ್​ ಖಾನ್​ ಸರದಿ.

ಜಮೀರ್​ ಅಹ್ಮದ್​ಗೂ ಕರೊನಾ ಸೋಂಕು ದೃಢಪಟ್ಟಿದ್ದು, ಈ ಬಗ್ಗೆ ಸ್ವತಃ ಅವರೇ ಟ್ವೀಟ್​ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

'ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಿನ್ನೆ(ಏ.21) ಕೋವಿಡ್ ಪರೀಕ್ಷೆಗೆ ಒಳಗಾಗಿದ್ದೆ. ವರದಿಯಲ್ಲಿ ಪಾಸಿಟಿವ್ ಬಂದಿದೆ. ವೈದ್ಯರ ಸಲಹೆ ಮೇರೆಗೆ ಹೋಂ ಕ್ವಾರಂಟೈನ್​ನಲ್ಲಿ ಇದ್ದೇನೆ. ಇತ್ತೀಚಿಗೆ ನನ್ನ ಸಂಪರ್ಕಕ್ಕೆ ಬಂದವರು ವೈದ್ಯಕೀಯ ಪರೀಕ್ಷೆ ಮಾಡಿಸಿಕೊಳ್ಳುವ ಮೂಲಕ ಆರೋಗ್ಯದ ಬಗ್ಗೆ ಜಾಗ್ರತೆ ವಹಿಸಿ ಎಂದು ಜಮೀರ್​ ಟ್ವೀಟ್​ ಮೂಲಕ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net