

ಕೆ.ಆರ್.ಪೇಟೆ: ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ಪಟ್ಟಣದ ಕೆಎಸ್ಆರ್ಟಿಸಿ ಡಿಪೋ ಮ್ಯಾನೇಜರ್ ಸೇರಿದಂತೆ 41 ಸಿಬ್ಬಂದಿ ಕರೊನಾ ಸೋಂಕು ದೃಢಪಟ್ಟಿದೆ.
ಡಿಪೋದಲ್ಲಿ 150 ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದು, ಈ ಪೈಕಿ 41 ಜನರಿಗೆ ಸೋಂಕು ತಗುಲಿದೆ. ಎಲ್ಲರೂ ಕ್ವಾರಂಟೈನ್ನಲ್ಲಿದ್ದಾರೆ. ಸಿಬ್ಬಂದಿ ಕೊರತೆಯಿಂದ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.