

ಮಂಡ್ಯ: ಜಿಲ್ಲೆಯಲ್ಲಿ ಕರೊನಾ ಸೋಂಕಿನ ಹಾವಳಿ ಹೆಚ್ಚಾಗಿದ್ದು, ಸೋಂಕಿತರ ಸಂಖ್ಯೆ ಶರವೇಗದಲ್ಲಿ ಸಾಗುತ್ತಿದೆ. ಕರೊನಾ ನಿಯಂತ್ರಣ ಕಾರ್ಯದಲ್ಲಿ ಹೋರಾಡುತ್ತಿದ್ದ ಮಂಡ್ಯ ಜಿಲ್ಲಾಧಿಕಾರಿ ಅಶ್ವಥಿ ಅವರಿಗೂ ಕರೊನಾ ಸೋಂಕು ತಗುಲಿದ್ದು, ಹೋಂ ಐಸೋಲೇಷನ್ಗೆ ಒಳಪಟ್ಟಿದ್ದಾರೆ.
ಹಲವು ದಿನಗಳಿಂದ ಜಿಲ್ಲೆಯ ಹಲವು ಭಾಗಗಳಿಗೆ ತೆರಳಿದ್ದ ಡಿಸಿ ಕರೊನಾ ನಿಯಂತ್ರಣ ಕಾರ್ಯ ನಿರ್ವಹಿಸುತ್ತಿದ್ದರು. ಇತ್ತೀಚಿಗೆ ಜಿಲ್ಲಾಧಿಕಾರಿ ಕಾರು ಚಾಲಕನಿಗೆ ಕರೊನಾ ದೃಢಪಟ್ಟಿತ್ತು. ಹಾಗಾಗಿ ಹೋಂ ಐಸೋಲೇಷನ್ ಆಗಿದ್ದ ಡಿಸಿ ಕರೊನಾ ಟೆಸ್ಟ್ ಮಾಡಿಸಿಕೊಂಡಿದ್ದು, ವರದಿ ಪಾಸಿಟಿವ್ ಬಂದಿದೆ.