

ತುಮಕೂರು: ದಿನದಿಂದ ದಿನಕ್ಕೆ ಮಹಾಮಾರಿ ಕರೊನಾ ಸೋಂಕಿತರ ಸಂಖ್ಯೆ ಶರವೇಗದಲ್ಲಿ ಹೆಚ್ಚುತ್ತಿದ್ದು, ಇದೀಗ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಮತ್ತು ಅವರ ಪುತ್ರಿಗೆ ಕರೊನಾ ಸೋಂಕು ತಗುಲಿದ್ದು, ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಚಿವ ಸಂಪುಟ ಸಭೆ ಸೇರಿದಂತೆ ಕಳೆದೆರಡು ದಿನಗಳಿಂದ ಸರಣಿ ಸಭೆಗಳಲ್ಲಿ ಭಾಗವಹಿಸಿದ್ದ ಜೆಸಿಎಂಗೆ ಕಿವಿ ನೋವು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಕರೊನಾ ಪರೀಕ್ಷೆ ಮಾಡಿಸಿಕೊಂಡಿದ್ದರು. ವರದಿಯಲ್ಲಿ ಪಾಸಿಟಿವ್ ಬಂದಿದೆ. ಮಾಧುಸ್ವಾಮಿ ಅವರ ಪುತ್ರಿಗೂ ಸೋಂಕು ಕಾಣಿಸಿಕೊಂಡಿದ್ದು, ರೋಗಲಕ್ಷಣಗಳಿಲ್ಲ.
ಮಾಧುಸ್ವಾಮಿ ತುಮಕೂರು ಹಾಗೂ ಚಿಕ್ಕನಾಯಕನಹಳ್ಳಿಯಲ್ಲಿ ಸರಣಿ ಸಭೆ ನಡೆಸಿದ್ದಾಗ ಹಾಜರಾಗಿದ್ದ ಅಧಿಕಾರಿಗಳ ವಲಯದಲ್ಲಿಯೂ ಆತಂಕ ಮೂಡಿದ್ದು, ಸಾಮೂಹಿಕ ಪರೀಕ್ಷೆಗೆ ಜಿಲ್ಲಾಡಳಿತ ಮುಂದಾಗಿದೆ.