ಧಾರಾವಾಹಿ ಚಿತ್ರೀಕರಣ ಮಾಡುತ್ತಿದ್ದ ತಂಡಕ್ಕೆ ಗ್ರಾಮಸ್ಥರಿಂದ ಹಿಗ್ಗಾಮುಗ್ಗಾ ತರಾಟೆ!

corona rules brake
Published on

ಮಂಡ್ಯ: ಕೋವಿಡ್​ ನಿಯಮ ಉಲ್ಲಂಘಿಸಿ ಶ್ರೀರಂಗಪಟ್ಟಣ ತಾಲೂಕಿನ ರೆಸಾರ್ಟ್‌ವೊಂದರಲ್ಲಿ ಧಾರಾವಾಹಿ ಚಿತ್ರೀಕರಣ ಮಾಡುತ್ತಿದ್ದ ತಂಡಕ್ಕೆ ಸ್ಥಳೀಯರು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.

ಯಂಗ್ ಐ ಲ್ಯಾಂಡ್ ರೆಸಾರ್ಟ್‌ನಲ್ಲಿ ಚಿತ್ರೀಕರಣ ನಡೆಯುತ್ತಿತ್ತು. ಅಲ್ಲಿಗೆ ಬಂದ ಸ್ಥಳೀಯರು, ಕರೊನಾ ಹಿನ್ನೆಲೆ ಯಾವುದೇ ಚಿತ್ರೀಕರಣ ಮಾಡುವಂತಿಲ್ಲ. ನಿಮಗೆ ಇಲ್ಲಿ ಚಿತ್ರೀಕರಣ ಮಾಡಲು ಯಾರು ಅನುಮತಿ ಕೊಟ್ಟದ್ದು? ರಾಜ್ಯದಲ್ಲಿ ಕರೊನಾ ಸೋಂಕು ಹೆಚ್ಚಾಗಿದೆ. ನೀವು ಇದನ್ನೆಲ್ಲ ಮರೆತು ಇಲ್ಲಿ ಚಿತ್ರೀಕರಣ ಮಾಡುತ್ತಿರುವುದು ತಪ್ಪು ಎಂದು ತರಾಟೆಗೆ ತೆಗೆದುಕೊಂಡರು. ಚಿತ್ರೀಕರಣ ತಂಡದ ಮೇಲೆ ಕೇಸ್ ಹಾಕಬೇಕು ಎಂದು ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net