ರಸ್ತೆ ಬದಿ ದನದ ಚರ್ಮ ಪತ್ತೆ

ರಸ್ತೆ ಬದಿ ದನದ ಚರ್ಮ ಪತ್ತೆ
Published on

ನಾಪೋಕ್ಲು: ನಾಪೋಕ್ಲು-ಕಕ್ಕಬ್ಬೆ ಮುಖ್ಯ ರಸ್ತೆಯ ಬದಿಯಲ್ಲಿ ಗುರುವಾರ ಕೊಳೆತ ಸ್ಥಿತಿಯಲ್ಲಿ ದನದ ಚರ್ಮ ಪತ್ತೆಯಾಗಿದ್ದು, ಸಾರ್ವಜನಿಕರು ಅಸಮಾಧಾನ ಹೊರಹಾಕಿದ್ದಾರೆ.

ನಾಪೋಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಈ ವ್ಯಾಪ್ತಿಯಲ್ಲಿ ಗೋ ಹತ್ಯೆ ಪ್ರಕರಣಗಳು ಜೀವಂತವಿರುವುದಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯುವುದರಿಂದ ಪರಿಸರ ನೈರ್ಮಲ್ಯವಾಗುವುದರೊಂದಿದೆ. ರೋಗಗಳು ಹರಡುವ ಸಾಧ್ಯತೆ ಇದೆ. ಸಂಬಂಧಿಸಿದವರು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net