ಹೊತ್ತಿ ಉರಿದ ಕ್ರೇನ್

Fire engine
Published on

ಬೆಂಗಳೂರು: ಚಲಿಸುತ್ತಿದ್ದಾಗ ಕ್ರೇನ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಪ್ರಕರಣ ಸೋಮವಾರ ತಡರಾತ್ರಿ ಯಲಚೇನಹಳ್ಳಿ ಮೆಟ್ರೋ ನಿಲ್ದಾಣದ ಬಳಿ ನಡೆದಿದೆ.
ವರ್ತೂರಿನಿಂದ ಬಿಡದಿಗೆ ಹೋಗುತ್ತಿದ್ದಾಗ ಮಾರ್ಗ ಮಧ್ಯೆ 12.30 ರ ಸಮಯದಲ್ಲಿ ಕ್ರೇನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನೋಡನೋಡುತ್ತಿದ್ದಂತೆ ರಸ್ತೆಯಲ್ಲಿ ಕ್ರೇನ್ ಧಗಧಗನೇ ಹೊತ್ತಿ ಉರಿದಿದೆ. ಕೂಡಲೇ ಕ್ರೇನ್ ನಿಲ್ಲಿಸಿದ ಚಾಲಕ ಕ್ರೇನ್‌ನಿಂದ ಹೊರಬಂದಿದ್ದಾರೆ. ಕೂಡಲೇ ಅಗ್ನಿಶಾಮಕ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ದೌಡಾಯಿಸಿ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆ ನಡೆದ ಸಮೀಪ ಪೆಟ್ರೋಲ್ ಬಂಕ್‌ಗಳು ಇದ್ದಿದ್ದರಿಂದ ಆತಂಕದ ವಾತಾವರಣ ನಿರ್ಮಾವಾಗಿತ್ತು. ಬ್ಯಾಟರಿಯಲ್ಲಿ ಶಾಕ್ ಸರ್ಕ್ಯುಟ್‌ನಿಂದಾಗಿ ಬೆಂಕಿ ಅವಘಡ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net