ಪಠ್ಯದೊಂದಿಗೆ ಸಂಸ್ಕಾರಯುತ ಶಿಕ್ಷಣ ಅವಶ್ಯ

sharada pooje
ಮಣಿಪಾಲ ಜ್ಞಾನಸುಧಾದಲ್ಲಿ ಶಾರದ ಪೂಜೆ ಆಚರಿಸಲಾಯಿತು.
Published on

ಕಾರ್ಕಳ: ಪಠ್ಯದ ಜತೆಗೆ ಸಂಸ್ಕೃತಿ ಸಂಸ್ಕಾರಯುಕ್ತ ಶಿಕ್ಷಣದ ಅರಿವು ಮೂಡಿಸುವಂತಹ ಕಾರ್ಯದಲ್ಲಿ ತೊಡಗಿಸಿಳ್ಳಬೇಕು ಎಂದು ಅಜೆಕಾರು ಪದ್ಮಗೋಪಾಲ ಎಜ್ಯುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಡಾ.ಸುಧಾಕರ ಶೆಟ್ಟಿ ಹೇಳಿದರು.

ಮಣಿಪಾಲ ವಿದ್ಯಾನಗರದ ಜ್ಞಾನಸುಧಾ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ಶಾರದ ಪೂಜೆಯ ಸಭಾಕಾರ್ಯಕ್ರಮದಲ್ಲಿ ಮಾತನಾಡಿದರು.

ಸಚ್ಚೇರಿಪೇಟೆ ಮುಂಡ್ಕೂರು ಸೇವಾ ಭಾರತಿ ಭಜನಾ ಮಂಡಳಿಯಿಂದ ಕುಣಿತ ಭಜನಾ ಸೇವೆ ನಡೆಯಿತು. ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಿಇಒ ದಿನೇಶ್ ಎಂ ಕೊಡವೂರು, ಟ್ರಸ್ಟಿ ವಿದ್ಯಾವತಿ ಶೆಟ್ಟಿ, ಹಿತೈಷಿಗಳಾದ ತ್ರಿವಿಕ್ರಮ ಕಿಣಿ, ದೇವೆಂದ್ರ ನಾಯಕ್, ಪದ್ಮನಾಭ ಭಂಡಿ, ಪಿಅರ್‌ಒ ಜ್ಯೋತಿ ಪದ್ಮನಾಭ ಭಂಡಿ, ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಗಣೇಶ್ ಶೆಟ್ಟಿ, ಉಡುಪಿ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸಂತೋಷ್, ಉಪಪ್ರಾಂಶುಪಾಲ ಪ್ರಕಾಶ್ ಜೋಗಿ ಉಪಸ್ಥಿತರಿದ್ದರು. ಉಪನ್ಯಾಸಕಿ ನಕ್ಷಾ ಕಲ್ಕೂರ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net