

ಯಲ್ಲಾಪುರ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ತಾಲೂಕಿನ ಮಾಗೋಡ ರಸ್ತೆಯಲ್ಲಿ ಕವಡಿಕೆರೆ ಬಳಿ ನಡೆದಿದೆ.
ಆಂಧ್ರಪ್ರದೇಶದ ಪ್ರವಾಸಿಗರು ಕಾರಿನಲ್ಲಿ ಮಾಗೋಡ ಜಲಪಾತಕ್ಕೆ ಬಂದು ಮರಳುತ್ತಿರುವ ವೇಳೆ ಘಟನೆ ಸಂಭವಿಸಿದೆ.
ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.
ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ವಿದ್ಯುತ್ ಕಂಬ ಮುರಿದು ಬಿದ್ದು ಸುತ್ತಮುತ್ತಲಿನ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ ಉಂಟಾಗಿದೆ.
ಕಾರಿನಲ್ಲಿದ್ದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ತಾಲೂಕು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗಿದೆ.
ಸ್ಥಳಕ್ಕೆ ಹೆಸ್ಕಾಂ ಸಿಬ್ಬಂದಿ ಭೇಟಿ ನೀಡಿದ್ದು, ಗ್ರಾಮಸ್ಥರ ಸಹಕಾರದೊಂದಿಗೆ ಬೇರೆ ಕಂಬ ಅಳವಡಿಸಿ, ವಿದ್ಯುತ್ ಸಂಪರ್ಕ ಕಲ್ಪಿಸಲು ಕ್ರಮ ಕೈಗೊಂಡಿದ್ದಾರೆ.