ಕರೊನಾ ಭೀತಿ: ರೈಲಿಗೆ ತಲೆಕೊಟ್ಟು ಪತ್ರಕರ್ತ ಆತ್ಮಹತ್ಯೆ!

suicide
Published on

ದಾವಣಗೆರೆ: ಅಮರಾವತಿ ಬಳಿ ತಾಲೂಕಿನ ಕುಂದೂರು ಗ್ರಾಮದ ಪತ್ರಕರ್ತ ಪರಮೇಶ್ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ‌‌.

ಕೆಲ ದಿನಗಳಿಂದ ಶೀತ, ಜ್ವರ, ಕೆಮ್ಮಿನಿಂದ ಬಳಲುತ್ತಿದ್ದ ಪರಮೇಶ್​ಗೆ ಕರೊನಾ ಸೋಂಕಿನ ಭೀತಿ ಆವರಿಸಿತ್ತು. ರಾಜ್ಯದಲ್ಲಿ ಬೆಡ್, ವೆಂಟಿಲೇಟರ್, ಆಕ್ಸಿಜನ್ ಸಮಸ್ಯೆಯಿಂದ ಚಿಕಿತ್ಸೆ ಸಿಗದೆ ನೂರಾರು ಮಂದಿ ಸಾಯುತ್ತಿದ್ದಾರೆ ಎಂದು ಭಯಗೊಂಡಿದ್ದ ಪರಮೇಶ್​, ಕರೊನಾ ಟೆಸ್ಟ್​ ಮಾಡಿಸಿಕೊಳ್ಳಲು ಹಿಂದೇಟು ಹಾಕಿದ್ದರು ಎನ್ನಲಾಗಿದೆ. ಇದೇ ಆತಂಕದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಮೃತರಿಗೆ ಪತ್ನಿ, ಇಬ್ಬರು ಗಂಡು ಮಕ್ಕಳು ಇದ್ದಾರೆ. ಮೃತ ಅಂತ್ಯಕ್ರಿಯೆ ಕುಂದೂರು ಗ್ರಾಮದಲ್ಲಿ ನೆರವೇರಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net