

ದಾವಣಗೆರೆ: ಕಾಮುಕರಿಬ್ಬರು ಬುದ್ಧಿಮಾಂದ್ಯ ವಿವಾಹಿತ ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದು, ಆಕೆ ಸ್ಥಿತಿ ಗಂಭೀರವಾಗಿದೆ.
ಇಂತಹ ಪೈಶಾಚಿಕ ಕೃತ್ಯ ದಾವಣಗೆರೆ ತಾಲೂಕಿನ ಮ್ಯಾಸರಹಳ್ಳಿ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ನಡೆದಿದ್ದು, ತೊಗರಿ ಹೊಲದಲ್ಲಿ ಅರೆಪ್ರಜ್ಞಾಸ್ಥಿತಿಯಲ್ಲಿದ್ದ ಸಂತ್ರಸ್ತೆಯನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ.
ತೊಗರಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ 25 ವರ್ಷದ ಮಹಿಳೆಗೆ ಮತ್ತು ಬರುವ ಪದಾರ್ಥ ನೀಡಿದ ಕಾಮುಕರು, ಆಕೆ ಮೇಲೆ ಅತ್ಯಾಚಾರವೆಸಗಿದ್ದಾರೆ. ದಾವಣಗೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಮ್ಯಾಸರಹಳ್ಳಿವ ಪ್ರಭು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಮತ್ತೊಬ್ಬ ಆರೋಪಿ ಕುಂದುವಾಡದ ಕಿರಣ್ ತಲೆ ಮರೆಸಿಕೊಂಡಿದ್ದು, ಈತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.