ಟೀಮ್ ತ್ರಾಸಿಯಿಂದ ಕೆಸರಿನಲ್ಲೊಂದು ದಿನ

gan (11)
Published on

ಗಂಗೊಳ್ಳಿ: ಟೀಮ್ ತ್ರಾಸಿ ಇದರ ವತಿಯಿಂದ ಕೆಸರಿನಲ್ಲೊಂದು ದಿನ ಕಾರ್ಯಕ್ರಮ ತ್ರಾಸಿ ಗ್ರಾಮದ ಇಪ್ಪಿಬೈಲ್ ಬೊಬ್ಬರ್ಯ ದೇವಸ್ಥಾನದ ಎದುರಿನ ಗದ್ದೆಯಲ್ಲಿ ಭಾನುವಾರ ವಿಶಿಷ್ಟವಾಗಿ ನಡೆಯಿತು.

ಬೆಳಗ್ಗೆಯಿಂದ ಸಂಜೆವರೆಗೆ ನಡೆದ ಕಾರ್ಯಕ್ರಮದಲ್ಲಿ ತ್ರಾಸಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಮಕ್ಕಳು, ಮಹಿಳೆಯರು ಹಾಗೂ ಪುರುಷರು ಗದ್ದೆಗಳಲ್ಲಿ ವಿವಿಧ ಆಟೋಟ ಸ್ಪರ್ಧೆಗಳನ್ನು ಆಡಿ ಸಂಭ್ರಮಿಸಿದರು. ಮಕ್ಕಳು, ಮಹಿಳೆಯರು ಹಾಗೂ ಪುರುಷರಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜನೆ ಮಾಡಲಾಗಿತ್ತು. ಬಿಸಿಲು ಮಳೆಯ ನಡುವೆ ಸಾರ್ವಜನಿಕರು ಉತ್ಸಾಹದಿಂದ ಗದ್ದೆಗಿಳಿದು ಕೆಸರಿನಲ್ಲಿ ಮಿಂದೆದ್ದು ಸಂಭ್ರಮಿಸಿದರು.

ತ್ರಾಸಿ ಗ್ರಾಪಂ ಅಧ್ಯಕ್ಷ ಮಿಥುನ್ ಎಂ.ಡಿ.ಬಿಜೂರು, ಗುಜ್ಜಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ತಮ್ಮಯ್ಯ ದೇವಾಡಿಗ, ಬೈಂದೂರು ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಸುಧಾಕರ ಅಚಾರ್ಯ ತ್ರಾಸಿ, ತ್ರಾಸಿ ಯುವಕ ಮಂಡಲ ಪದಾಧಿಕಾರಿಗಳು, ಸದಸ್ಯರು, ವಿವಿಧ ಸಂ ಸಂಸ್ಥೆಗಳ ಸದಸ್ಯರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net