ದೇಶಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸುವ ಸುದಿನ

15 pnh 1
Published on

ಪಂಚನಹಳ್ಳಿ: ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕೊಡುಗೆಗಳನ್ನು ಸ್ಮರಿಸುವ, ಗೌರವಿಸುವ ಸುದಿನ ಎಂದು ಪಂಚನಹಳ್ಳಿ ಗ್ರಾಪಂ ಅಧ್ಯಕ್ಷ ಪಿ.ಆರ್.ರಂಗನಾಥ್ ಹೇಳಿದರು.

ಪಂಚನಹಳ್ಳಿಯಲ್ಲಿ ಆಯೋಜಿಸಿದ್ದ ಅಂಬೇಡ್ಕರ್ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಗ್ರಾಮ ಪಂಚಾಯಿತಿಯ ಮಟ್ಟದಲ್ಲಿ ಬರುವ ಅನುದಾನಗಳನ್ನು ಸಮರ್ಪಕವಾಗಿ ತಲುಪಿಸಲಾಗುತ್ತಿದೆ. ಅಂಬೇಡ್ಕರ್ ಕಾಲನಿಯ ದೇವಾಲಯದ ಎದುರು ಸೋಲಾರ್ ದೀಪ ಅಳವಡಿಸಲಾಗುವುದು ಎಂದು ತಿಳಿಸಿದರು.

ಗ್ರಾಮ ಪಂಚಾಯತಿ ಸದಸ್ಯ ಮರುಳಪ್ಪ ಮಾತನಾಡಿ, ಅಂಬೇಡ್ಕರ್ ಅವರ ಬದುಕು, ಜೀವನ ಶೈಲಿ, ಕೊಡುಗೆಗಳು ಎಲ್ಲರಿಗೂ ಸ್ಫೂರ್ತಿದಾಯಕ ಎಂದರು. ತಾಲೂಕು ಪಂಚಾಯತಿ ಮಾಜಿ ಸದಸ್ಯ ಪ್ರಸನ್ನ ಕುಮಾರ್ ಮಾತನಾಡಿ, ಅಂಬೇಡ್ಕರ್ ಅವರು ನೀಡಿದ ಸಂದೇಶಗಳು ಇಂದಿಗೂ ಪ್ರಸ್ತುತ. ಅವರ ಆದರ್ಶಗಳನ್ನು ಎಲ್ಲರೂ ಪಾಲಿಸಬೇಕು ಎಂದು ತಿಳಿಸಿದರು. ಗ್ರಾಪಂ ಉಪಾಧ್ಯಕ್ಷ ರೂಪ, ಸದಸ್ಯರಾದ ರೇಖಾ, ಶೀಲಾ, ಸಿದ್ದರಾಮಪ್ಪ, ರವಿಕುಮಾರ್, ಸೋಮಶೇಖರ್, ಮರಳಪ್ಪ, ಪಿಎಸ್‌ಐ ಗೀತಾ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net