

ಕೊಳ್ಳೇಗಾಲ : ತಾಲೂಕಿನ ಸತ್ತೇಗಾಲ ಹ್ಯಾಂಡ್ ಪೋಸ್ಟ್‌ನ ಬಸ್ ನಿಲ್ದಾಣ ಬದಿ ನಿಲುಗಡೆ ಮಾಡಿದ್ದ ಸ್ವಿಫ್ಟ್ ಕಾರಿನಲ್ಲಿ ಅಪರಿಚಿತ ಗಂಡಸಿನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ.
ಸುಮಾರು 40 ರಿಂದ 45 ವರ್ಷದ ವಯಸ್ಸಿನ ಮೃತದೇಹ ಇದಾಗಿದೆ. ಕಾರಿನ ಹಿಂಬದಿ ಸೀಟ್‌ನಲ್ಲಿ ಮಲಗಿದ್ದ ಸ್ಥಿತಿಯಲ್ಲಿ ಮೃತದೇಹ ದೊರೆತಿದೆ. ಕಾರಿನ ಡೋರ್ ನಿಂದ ರಕ್ತ ಹೊರಗೆ ಸುರಿದು ವಾಸನೆ ಬರುತ್ತಿದ್ದುದನ್ನು ಗಮನಿಸಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು.
ಡಿವೈಎಸ್ಪಿ ಧಮೇಂದ್ರ, ವೃತ್ತ ನಿರೀಕ್ಷಕ ಶಿವಮಾದಯ್ಯ, ಪಿಎಸ್‌ಐಗಳಾದ ಸುಪ್ರೀತ್, ಪಿಎಸ್‌ಐ ಚೆಲುವರಾಜು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಬೆರಳಚ್ಚು ತಜ್ಞ ತಂಡ ಪರಿಶೀಲಿಸಿದ್ದಾರೆ. ಶವ ಕೊಳೆತ ಸ್ಥಿತಿಯಲ್ಲಿ ದೊರೆತಿದ್ದು ಬಾಯಿ ಹಾಗೂ ಮೂಗಿನಲ್ಲಿ ರಕ್ತ ಸ್ರಾವವಾಗಿರುವುದು ಕಂಡು ಬಂದಿದೆ. ಕಾರಿನ ನಂಬರ್ ಕೆಎ14 ಎಂದಿದ್ದು, ಶಿವಮೊಗ್ಗ ಮೂಲದ್ದು ಎಂದು ಹೇಳಲಾಗುತ್ತಿದೆ. ಶುಕ್ರವಾರ ಮಧ್ಯಾಹ್ನದಿಂದಲೇ ಕಾರು ನಿಂತಲ್ಲೆ ನಿಂತಿದೆ ಎನ್ನಲಾಗಿದೆ. ಪ್ರಕರಣ ದಾಖಲಿಸಿಕೊಂಡ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕೊಳ್ಳೇಗಾಲ ಉಪ ವಿಭಾಗ ಆಸ್ಪತ್ರೆಗೆ ರವಾನಿಸಲಾಗಿದೆ.