

ಹುಬ್ಬಳ್ಳಿ: ನಗರದ ಹೊರವಲಯದ ತಾರಿಹಾಳ ಬಳಿಯ ಜಮೀನೊಂದರಲ್ಲಿ ಶವ ಪತ್ತೆಯಾಗಿದ್ದು, ಕೊಲೆಯಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಕುಂದಗೋಳ ತಾಲೂಕಿನ ಇಂಗಳಗಿ ಗ್ರಾಮದ ಷಣ್ಮುಖಪ್ಪ (55) ಮೃತ ವ್ಯಕ್ತಿ. ಮೃತನ ಪಕ್ಕ ಮದ್ಯದ ಬಾಟಲಿಗಳು ಬಿದ್ದಿದ್ದು, ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತನಿಖೆ ನಂತರ ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ತನಿಖೆ ನಂತರ ಗೊತ್ತಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.