

ತರೀಕೆರೆ: ಅಜ್ಜಂಪುರ ತಾಲೂಕು ಕಚೇರಿ ಸಭಾಂಗಣದಲ್ಲಿ ನ.18ರಂದು ಬೆಳಗ್ಗೆ 9.30ಕ್ಕೆ ಕನಕದಾಸರ ಜಯಂತಿ ಆಚರಿಸಲಾಗುವುದು ಎಂದು ತಹಸೀಲ್ದಾರ್ ಶಿವಶರಣಪ್ಪ ಕಟ್ಟೋಳಿ ತಿಳಿಸಿದರು.
ಅಜ್ಜಂಪುರ ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಗುರುವಾರ ಕನಕದಾಸರ ಜಯಂತಿ ಹಿನ್ನೆಲೆಯಲ್ಲಿ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕನಕದಾಸರ ಜಯಂತಿ ಅಂಗವಾಗಿ ಸಂಗೊಳ್ಳಿ ರಾಯಣ್ಣ ಪ್ರತಿಮೆಯಿಂದ ಕನಕದಾಸ ವೃತ್ತದವರೆಗೆ ವಿಜೃಂಭಣೆಯ ಮೆರವಣಿಗೆ ನಡೆಸಲಾಗುವುದು. ವೀರಗಾಸೆ, ಡೊಳ್ಳು , ವಿವಿಧ ಮೇಳಗಳು ಮೆರವಣಿಗೆಗೆ ಮೆರಗು ನೀಡುತ್ತಿದೆ. ಶ್ರೀಬೀರಲಿಂಗೇಶ್ವರ ದೇಗುಲ ಆವರಣದಲ್ಲಿ ವೇದಿಕೆ ಕಾರ್ಯಕ್ರಮ ನಡೆಸಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಕೆಪಿಸಿಸಿ ಸದಸ್ಯ ಜಿ.ನಟರಾಜ್, ಬಗರ್ ಹುಕುಂ ಸಮಿತಿ ಸದಸ್ಯ ಪ್ರಕಾಶ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಟಿ.ಜಿ.ರಮೇಶ್, ಎಎಸ್‌ಐ ಚಂದ್ರಶೇಖರ್, ಕನಕ ನೌಕರರ ಸಂಘದ ಅಧ್ಯಕ್ಷ ಕೆ.ತಿಪ್ಪೇಶ್ ಮತ್ತಿತರರಿದ್ದರು.