

ಮಡಿಕೇರಿ:
ಕರ್ನಾಟಕ ಉಚ್ಚ ನ್ಯಾಯಾಲಯ ತೀರ್ಪಿನಂತೆ ಮಂಗಳೂರು ವಿವಿ ಘಟಕ ಕಾಲೇಜಾದ ಮಡಿಕೇರಿ
ಎಫ್ ಎಂ ಕೆ ಎಂ ಸಿ ಕಾಲೇಜಿನ ಉಪನ್ಯಾಸಕರನ್ನು ಖಾಯಂಗೊಳಿಸುವ ಸಂಬಂಧ ಕಾಲೇಜು ನಿಯೋಗ ಮಂಗಳವಾರ ಉನ್ನತ ಶಿಕ್ಷಣ ಸಚಿವ ಡಾ. ಎಂ ಸಿ ಸುಧಾಕರ್ ಅವರನ್ನು ಭೇಟಿ ಮಾಡಿತ್ತು.
ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರೂ ಆದ ವಿರಾಜಪೇಟೆ ಶಾಸಕ ಎ. ಎಸ್. ಪೊನ್ನಣ್ಣ ನೇತೃತ್ವದಲ್ಲಿ ಈ ಸಂಬಂಧ ಸಚಿವರ ಜತೆ ಚರ್ಚೆ ನಡೆಸಿ ಉಚ್ಚ ನ್ಯಾಯಾಲಯದ ಆದೇಶದಂತೆ ಖಾಯಂ ಗೊಳಿಸಲು ಮನವಿ ಮಾಡಲಾಯಿತು. ಈ ಬಗ್ಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದೆಂದು ಸಚಿವರು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಕೊಡಗು ವಿಶ್ವವಿದ್ಯಾನಿಲಯದ ಕುಲಪತಿ ಅಶೋಕ್ ಆಲೂರು ಎಫ್ಎಂ ಕೆಎಂಸಿ ಕಾಲೇಜಿನ ಪ್ರಾಂಶುಪಾಲ ರಾಘವ್, ಉನ್ನತ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳು, ಉಪನ್ಯಾಸಕರು ಭಾಗವಹಿಸಿದ್ದರು.