ನಿಷ್ಠಾವಂತರಿಗೆ ಮನ್ನಣೆ ನೀಡಲು ಆಗ್ರಹ

6 vikram 1 (Anand Jadhav)
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಕಾಂಗ್ರೆಸ್​ ಪ ಪ್ಯಾರಾಚ್ಯೂಟ್​ (ಪಾಂತರ ಮಾಡುವ) ನಾಯಕರಿಗೆ ಮನ್ನಣೆ ನೀಡದೆ ನಿಷ್ಠಾವಂತ ಕಾರ್ಯಕರ್ತರಿಗೆ ಆದ್ಯತೆ ನೀಡಬೇಕು ಎಂದು ಹು&ಧಾ ಮಹಾನಗರ ಜಿಲ್ಲಾ ಪ್ರಧಾನ ಕಾರ್ಯದಶಿರ್ ಆನಂದ ಜಾಧವ ಆಗ್ರಹಿಸಿದರು.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸಭೆಯಿಂದ ವಿಧಾನಪರಿಷತ್​ಗೆ ಆಯ್ಕೆಯಾಗಿರುವ 11 ಸದಸ್ಯರ ಅವಧಿ ಜೂ. 17ಕ್ಕೆ ಮುಕ್ತಾಯವಾಗಲಿದೆ. ಪರಿಷತ್​ ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್​ 7 ಸ್ಥಾನಗಳನ್ನು ಗೆಲ್ಲುವ ಅವಕಾಶವಿದ್ದು, ಈ ಚುನಾವಣೆಯಲ್ಲಿ ತಳಮಟ್ಟದ ಕಾರ್ಯಕರ್ತರಿಗೆ ಪ್ರಾತಿನಿಧ್ಯ ನೀಡಬೇಕು. ಹಿಂದೆ ನೀಡಿದ ಅಭ್ಯಥಿರ್ಗಳಿಗೆ ಮತ್ತೆ ಪುನರಾವರ್ತನೆ ಮಾಡಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ, ಕೆಪಿಸಿಸಿ ಅಧ್ಯ ಶಿವಕುಮಾರ ಅವರಿಗೆ ಮನವಿ ಮಾಡಿದರು.
ರಾರ್ಬಟ್​ ದದ್ದಾಪುರಿ 1976 ರಿಂದ ಕಾಂಗ್ರೆಸ್​ ಪ ಸಂಟನೆಯಲ್ಲಿ ತೊಡಗಿಕೊಂಡಿದ್ದಾರೆ. ಯುವ ಕಾಂಗ್ರೆಸ್​, ಸೇವಾದಳ, ಅಲ್ಪಸಂಖ್ಯಾತ ಟಕಗಳಲ್ಲಿ ಬ್ಲಾಕ್​ ಹಾಗೂ ಜಿಲ್ಲಾ ಮಟ್ಟದಲ್ಲಿ ಪದಾಧಿ-ಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಪ್ರಸ್ತುತ ಕೆಪಿಸಿಸಿ ಪ್ರಧಾನ ಕಾರ್ಯದಶಿರ್ಯಾಗಿ ಪ ಸಂಟನೆಯಲ್ಲಿ ತೊಡಗಿಕೊಂಡಿದ್ದಾರೆ. ಈ ಬಾರಿ ಉತ್ತರ ಕರ್ನಾಟಕದ ಅಲ್ಪಸಂಖ್ಯಾತರ ಕೋಟಾದಲ್ಲಿ ಅವರಿಗೆ ಎಂಎಲ್​ಸಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net