ಹೊತ್ತಿ ಉರಿದ ಹೋಟೆಲ್​! ದೇವನಹಳ್ಳಿ ಹೆದ್ದಾರಿಯಲ್ಲಿ ಕೆಲಕಾಲ ಆತಂಕ

ಧಗಧಗಿಸಿ ಹೊತ್ತಿ ಉರಿದ ಹೋಟೆಲ್​! ದೇವನಹಳ್ಳಿ ಹೆದ್ದಾರಿಯಲ್ಲಿ ಕೆಲಕಾಲ ಆತಂಕ - youtube
Published on

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಹೊರವಲಯದ ಹೆದ್ದಾರಿ ಬದಿಯ ಹೋಟೆಲ್​ವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ ಹೋಟೆಲ್​ ಸುಟ್ಟು ಭಸ್ಮವಾಗಿದೆ.

ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಗುರುವಾರ ಬೆಳಗ್ಗೆ ಹೋಟೆಲ್​ನಲ್ಲಿ ಆಕಸ್ಮಿಕ ಬೆಂಕಿ ಬಿದ್ದು, ನೋಡ ನೋಡುತ್ತಲೇ ಇಡೀ ಹೋಟೆಲ್​ ಧಗಧಗಿಸಿ ಹೊತ್ತಿ ಉರಿಯಿತು. ಮುಗಿಲೆತ್ತರಕ್ಕೆ ದಟ್ಟ ಹೊಗೆ ಆವರಿಸಿ ಸ್ಥಳೀಯರಲ್ಲಿ ಕೆಲಕಾಲ ಆತಂಕ ಮೂಡಿಸಿತ್ತು. ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟರು.

ಅದೃಷ್ಟವಶಾತ್ ಹೋಟೆಲ್ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಬೆಂಕಿ ಅವಘಡ ಸಂಭವಿಸಿದ ವೇಳೆ ಗ್ರಾಹಕರು ಇಲ್ಲದ ಕಾರಣ ಭಾರಿ ಅನಾಹುತ ತಪ್ಪಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net