ದೇಶದ ಜನತೆಗಾಗಿ ವಿಕಸಿತ ಭಾರತ ಬಜೆಟ್

New Tenginakayi mahesh New
Published on

ಹುಬ್ಬಳ್ಳಿ : ಕೇಂದ್ರದ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಉನ್ನತ ಶಿಕ್ಷಣಕ್ಕೆ 10 ಲಕ್ಷ ರೂ.ವರೆಗೆ ಸಾಲ ಸೌಲಭ್ಯದ ಅವಕಾಶ, ಕೌಶಲ್ಯಾಭಿವೃದ್ಧಿ ತರಬೇತಿ ಸಾಲ ಸೌಲಭ್ಯ 7.5 ಲಕ್ಷ ರೂ ಹೆಚ್ಚಳ, ಕೌಶಲ್ಯ ಮತ್ತು ಉದೊ್ಯೕಗ ಸೃಷ್ಟಿಗೆ ವಿಶೇಷ ಆದ್ಯತೆ ನೀಡಲಾಗಿದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಬಜೆಟ್ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಹೊಸದಾಗಿ ಕೆಲಸಕ್ಕೆ ಸೇರುವವರಿಗೆ ಒಂದು ತಿಂಗಳ ಸಂಬಳ ಪ್ರೋತ್ಸಾಹ ಧನ ಘೋಷಿಸಿದ್ದು ಮಾದರಿ ನಿರ್ಧಾರವಾಗಿದೆ. ಆದಾಯ ತೆರಿಗೆ ಹೊಸ ಪದ್ಧತಿ ತರಲಾಗಿದೆ. ಇದರಿಂದ ಮಧ್ಯಮ ವರ್ಗದವರಿಗೆ ಅನುಕೂಲ ಆಗಲಿದೆ. ಒಂದು ಸಾವಿರ ಕೈಗಾರಿಕಾ ಕೇಂದ್ರಗಳ ಸ್ಥಾಪನೆ, ಕೃಷಿ ಕ್ಷೇತ್ರಕ್ಕೆ 1.52 ಲಕ್ಷ ಕೋಟಿ ರೂ. ಅನುದಾನ ನೀಡುವ ಮೂಲಕ ರೈತರ ಏಳಿಗೆ, ಸೈನಿಕ ಕಲ್ಯಾಣ, ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿರುವುದು ಹೆಮ್ಮೆಯ ಸಂಗತಿ ಎಂದು ಪ್ರತಿಕ್ರಿಯಿಸಿದ್ದಾರೆ.

ಧಾರ್ವಿುಕ ಪ್ರವಾಸೋದ್ಯಮಕ್ಕೆ ಕೇಂದ್ರ ಬಜೆಟ್​ನಲ್ಲಿ ವಿಶೇಷ ಒತ್ತು ನೀಡಲಾಗಿದೆ. ಕಾಶಿ ವಿಶ್ವನಾಥ ಕಾರಿಡಾರ್ ಮಾದರಿಯಲ್ಲಿ ಗಯಾದ ವಿಷ್ಣುಪಾದ, ಬೋಧಗಯಾದ ಮಹಾಬೋಧಿ ದೇವಾಲಗಳನ್ನು ಪುನರ್ ಸ್ಥಾಪನೆ ಮಾಡಲಾಗುತ್ತದೆ. ಜೊತೆಗೆ ಉಚಿತ ಪಡಿತರ ಯೋಜನೆ 2029 ರವರೆಗೆ ಮುಂದುವರೆಸಿ, ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯನ್ನು 5 ವರ್ಷ ವಿಸ್ತರಣೆ ಮಾಡುವ ಮೂಲಕ ಬಡವರ ಕಲ್ಯಾಣಕ್ಕಾಗಿ ಮೋದಿ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net