ಆಷಾಢ ಶುಕ್ರವಾರ ಚಾಮುಂಡಿ ಬೆಟ್ಟಕ್ಕೆ ಭಕ್ತರಿಗೆ ಪ್ರವೇಶವಿಲ್ಲ: ಜಿಲ್ಲಾಧಿಕಾರಿ ಆದೇಶ

chamundi hill
Published on

ಮೈಸೂರು: ಕರೊನಾ ಸೋಂಕು ಹರಡುವಿಕೆ ಭೀತಿ ಹಿನ್ನೆಲೆ ಚಾಮುಂಡಿ ಬೆಟ್ಟಕ್ಕೆ ಆಷಾಢ ಶುಕ್ರವಾರ ಭಕ್ತರಿಗೆ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಜುಲೈ 9- ಆಷಾಡ ಅಮಾವಾಸ್ಯೆ

ಜುಲೈ 16-ಮೊದಲನೇ ಆಷಾಢ ಶುಕ್ರವಾರ

ಜುಲೈ 23- ಎರಡನೇ ಆಷಾಢ ಶುಕ್ರವಾರ

ಜುಲೈ 30- ಮೂರನೇ ಆಷಾಢ ಶುಕ್ರವಾರ, ಅಮ್ಮನವರ ವರ್ಧಂತಿ

ಆಗಸ್ಟ್​6- ನಾಲ್ಕನೇ ಆಷಾಢ ಶುಕ್ರವಾರ

ಆಗಸ್ಟ್​ 8- ಭೀಮನ ಅಮಾವಾಸ್ಯೆ

ಈ ದಿನಗಳಂದು ಚಾಮುಂಡಿಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಮಧ ವಿಧಿಸಿ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್​ ಆದೇಶ ಹೊರಡಿಸಿದ್ದಾರೆ. ಆಷಾಡ ಮಾಸದಲ್ಲಿ ಶನಿವಾರ ಮತ್ತು ಭಾನುವಾರವೂ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಅಲ್ಲದೆ ಇಂದಿನಿಂದ ಪ್ರತಿದಿನ ಸಂಜೆ 6ರ ಬಳಿಕ ದೇವರ ದರ್ಶನಕ್ಕೆ ಅವಕಾಶ ಇರುವುದಿಲ್ಲ.

ಪ್ರತಿ ವರ್ಷ ಆಷಾಢ ಮಾಸದಲ್ಲಿ ರಾಜ್ಯದ ನಾನಾ ಮೂಲೆಗಳಿಂದ ಲಕ್ಷಾಂತರ ಸಂಖ್ಯೆಯ ಭಕ್ತರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಬರುತ್ತಿದ್ದರು. ಕರೊನಾದಂತಹ ಸಂಕಷ್ಟ ಸಂದರ್ಭದಲ್ಲಿ ಭಕ್ತರ ಪ್ರವೇಶಕ್ಕೆ ಅವಕಾಶ ಕೊಟ್ಟರೆ ಸೋಂಕು ಮತ್ತಷ್ಟು ಜನರಿಗೆ ವ್ಯಾಪಿಸುವ ಸಾಧ್ಯತೆ ಇದೆ. ಹಾಗಾಗಿ ಮುಂಜಾಗ್ರತಾ ಕ್ರಮವಾಗಿ ಭಕ್ತರ ಪ್ರವೇಶಕ್ಕೆ ನಿರ್ಬಂಧ ಏರಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net