ಬಕ್ರೀದ್​ ಹಿನ್ನೆಲೆ ಇಂದು ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶಕ್ಕಿಲ್ಲ ಅವಕಾಶ

chamundi-hill
Published on

ಮೈಸೂರು: ಇಂದು(ಬುಧವಾರ) ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ.

ಕರೊನಾ ಸೋಂಕು ಹರಡುವಿಕೆ ಭೀತಿ ಹಿನ್ನೆಲೆ ಚಾಮುಂಡಿ ಬೆಟ್ಟಕ್ಕೆ ಆಷಾಢ ಶುಕ್ರವಾರ, ಆಷಾಢ ಮಾಸದಲ್ಲಿ ಶನಿವಾರ ಮತ್ತು ಭಾನುವಾರ ಭಕ್ತರ ಪ್ರವೇಶವನ್ನು ನಿರ್ಬಂಧಿಸಿರುವ ಜಿಲ್ಲಾಡಳಿತ ಸೋಮವಅರ, ಮಂಗಳವಾರ ಬುಧವಾರ, ಗುರುವಾರ ಮಾತ್ರವೇ ಭಕ್ತರ ಭೇಟಿಗೆ ಅವಕಾಶ ನೀಡಿತ್ತು. ಅಲ್ಲದೆ, ಈ ದಿನಗಳಂದೂ ಸಂಜೆ 6ರ ಬಳಿಕ ದೇವರ ದರ್ಶನಕ್ಕೆ ಅವಕಾಶ ಇರುವುದಿಲ್ಲ ಎಂದು ತಿಳಿಸಿತ್ತು. ಆದರೆ, ಇಂದು(ಜು.21) ಬಕ್ರೀದ್ ಪ್ರಯುಕ್ತ ಸರ್ಕಾರಿ ರಜೆ ಇರುವ ಹಿನ್ನೆಲೆ ಬೆಟ್ಟಕ್ಕೆ ಹೆಚ್ಚು ಜನ ಆಗಮಿಸುವ ಸಾಧ್ಯತೆ ಇದೆ. ಹಾಗಾಗಿ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರ ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net