ನ.29ರಿಂದ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದಿಪೋತ್ಸವ

DHARMASTHALA-LAXDEEPA
Published on

ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿಯ ಲಕ್ಷದಿಪೋತ್ಸವ ನ.29ರಿಂದ ಡಿ.4ರವರೆಗೆ ವಿವಿಧ ಕಾರ್ಯಕ್ರಮಗಳೊಂದಿಗೆ ನೆರವೇರಲಿದೆ.

ನ. 29ರಂದು ವಸಂತಕಟ್ಟೆ ಉತ್ಸವ, 30ರಂದು ಕೆರೆಕಟ್ಟೆ ಉತ್ಸವ, ಡಿ.1ರಂದು ಲಲಿತೋದ್ಯಾನ ಉತ್ಸವ, 2ರಂದು ಕಂಚಿಮಾರುಕಟ್ಟೆ ಉತ್ಸವ ಹಾಗೂ ಸರ್ವಧರ್ಮ ಸಮ್ಮೇಳನ, 3ರಂದು ಗೌರಿಮಾರುಕಟ್ಟೆ ಉತ್ಸವ, ಸಾಹಿತ್ಯ ಸಮ್ಮೇಳನ ನಡೆಯಲಿದೆ. ನ.4ರಂದು ಚಂದ್ರನಾಥ ಸ್ವಾಮಿಯ ಸಮವಸರಣ ಪೂಜೆಯೊಂದಿಗೆ ಲಕ್ಷದಿಪೋತ್ಸವ ಕಾರ್ಯಕ್ರಮಗಳು ಸಮಾಪನಗೊಳ್ಳಲಿವೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net