ಬಿಜೆಪಿಯಿಂದ ವಿಭಿನ್ನ ಪ್ರತಿಭಟನೆ

protest-2
ಹೆಬ್ರಿ ತಾಲೂಕಿನ ಅಂಡಾರು ಕೊಂದಲ್ಕೆಯಲ್ಲಿ ಮುನಿಯಾಲು ಉದಯ ಕುಮಾರ್ ಶೆಟ್ಟಿ ವಿರುದ್ಧ ಬುಧವಾರ ಬಿಜೆಪಿಯಿಂದ ವಿಭಿನ್ನ ರೀತಿಯ ಪ್ರತಿಭಟನೆ ನಡೆಯಿತು
Published on

ಹೆಬ್ರಿ: ಹೆಬ್ರಿ ತಾಲೂಕಿನ ಅಂಡಾರು ಕೊಂದಲ್ಕೆಯಲ್ಲಿ ಮುನಿಯಾಲು ಉದಯ ಕುಮಾರ್ ಶೆಟ್ಟಿ ವಿರುದ್ಧ ಬುಧವಾರ ಬಿಜೆಪಿಯಿಂದ ವಿಭಿನ್ನ ರೀತಿಯ ಪ್ರತಿಭಟನೆ ನಡೆಯಿತು.

ಮುನಿಯಾಲು ಉದಯ ಕುಮಾರ್ ಶೆಟ್ಟಿಯವರ ಪ್ರತಿಕೃತಿ ಮಾಡಿ ಹುಟ್ಟೂರ ಸನ್ಮಾನ ಮಾಡುವ ಮೂಲಕ ವಿಡಂಬನಾ ರೀತಿಯಲ್ಲಿ ಪ್ರತಿಭಟನೆ ಮಾಡಿದರು. ಕಡ್ತಲ ಸತೀಶ್ ಪೂಜಾರಿ ಅವರು ಮುನಿಯಾಲು ಉದಯ ಕುಮಾರ್ ಶೆಟ್ಟಿಯವರ ಸನ್ಮಾನ ಪತ್ರವನ್ನು ವಿಡಂಬನ ರೀತಿಯಲ್ಲಿ ವಾಚಿಸಿ ಉದಯ ಶೆಟ್ಟಿಯವರ ಕಳಪೆ ಕಾಮಗಾರಿಗಳ ಪಟ್ಟಿ ತಿಳಿಸಿದರು.

ಮಾಜಿ ಎಪಿಎಂಸಿ ಅಧ್ಯಕ್ಷ ರತ್ನಾಕರ್ ಅಮೀನ್, ರಾಜ್ಯ ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿ ವಿಖ್ಯಾತ್ ಶೆಟ್ಟಿ, ಯುವಮೋರ್ಚಾ ಅಧ್ಯಕ್ಷ ರಾಕೇಶ್ ಶೆಟ್ಟಿ, ಬಿಜೆಪಿ ಯುವಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಸುಹಾಸ್ ಶೆಟ್ಟಿ, ವರಂಗ ಗ್ರಾಪಂ ಅಧ್ಯಕ್ಷ ಸಂತೋಷ್ ಅಮೀನ್, ಹೆಬ್ರಿ ಶಕ್ತಿಕೇಂದ್ರ ಅಧ್ಯಕ್ಷ ಲಕ್ಷ್ಮೀನಾರಾಯಣ ನಾಯಕ್, ಜಿಪಂ ಮಾಜಿ ಸದಸ್ಯೆ ಜ್ಯೋತಿ ಹರೀಶ್ ಮೊದಲಾದವರಿದ್ದರು. ಸುಹಾಸ್ ಶೆಟ್ಟಿ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net