

ಬೆಂಗಳೂರು: ಇನ್ನೊಂದು ವಾರ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಾರ್ವಜನಿಕರ ಭೇಟಿಗೆ ಲಭ್ಯ ಇರಲ್ಲ. ವೈದ್ಯರ ಸಲಹೆ ಮೇರೆಗೆ ಕುಮಾರಸ್ವಾಮಿ ವಿಶ್ರಾಂತಿ ತೆಗೆದುಕೊಳ್ಳಲಿದ್ದಾರೆ.
ಕನಿಷ್ಠ ಒಂದು ವಾರ ಯಾರನ್ನೂ ಭೇಟಿ ಮಾಡಬೇಡಿ, ಹೆಚ್ಚು ಮಾತನಾಡಬಾರದು ಎಂದು ವೈದ್ಯರು ಸಲಹೆ ಮಾಡಿದ್ದಾರೆ. ಸದ್ಯ ನಾನು ವಿಶ್ರಾಂತಿ ಪಡೆಯುತ್ತಿದ್ದೇನೆ. ಈ ಸಂದರ್ಭದಲ್ಲಿ ನಾನು ಸಾರ್ವಜನಿಕರ ಭೇಟಿಗೆ ಲಭ್ಯ ಇರುವುದಿಲ್ಲ. ಯಾರೂ ನನ್ನ ಭೇಟಿಗೆಂದು ಬಿಡದಿ ತೋಟ ಅಥವಾ ಪಕ್ಷದ ಕಚೇರಿಗೆ ಬರಬೇಡಿ ಎಂದು ಕುಮಾರಸ್ವಾಮಿ ಮನವಿ ಮಾಡಿದ್ದಾರೆ.