ಶಕ್ತಿ ಯೋಜನೆಯ ಸಾಕಾರಕ್ಕೆ ಎರಡು ಪ್ರಶಸ್ತಿಯ ಸತ್ಕಾರ

ksrtc
Published on

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿಯ ಗ್ಯಾರೆಂಟೆ ಯೋಜನೆಗಳಲ್ಲಿ ಒಂದಾದ ‘ಶಕ್ತಿ ಯೋಜನೆ’ ಹಾಗೂ ವಿನೂತನ ಕಾರ್ಮಿ ಕಲ್ಯಾಣ ಉಪಕ್ರಮಗಳನ್ನು ಸಾಕಾರಗೊಳಿಸಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿಗೆ ಪ್ರಶಸ್ತಿಗಳೊಂದಿಗೆ ಸತ್ಕಾರ ಸಿಗುತ್ತಿದೆ.
ಇದೀಗ ಶಕ್ತಿಯ ಯಶಸ್ಸಿನ ಕಾರಣಕ್ಕಾಗಿ ಸ್ಕಾಚ್ ಸಾಲಿನ ೨ ರಾಷ್ಟ್ರೀಯ ಪುರಸ್ಕಾರಗಳು ಕೆಎಸ್‌ಆರ್‌ಟಿಸಿಗೆ ಲಭಿಸಿವೆ. ದೆಹಲಿ ಮೂಲದ ಸ್ಕ್ವಾಚ್ ಸಂಸ್ಥೆಯು ಸ್ವತಂತ್ರ ವಿಚಾರ ತಜ್ಞ ವೇದಿಕಾ ಸಂಸ್ಥೆಯಾಗಿದ್ದು ೧೯೯೭ರಲ್ಲಿ ಸ್ಥಾಪಿತವಾಗಿರುತ್ತದೆ. ಈ ಸಂಸ್ಥೆಯು ೨೦೦೩ ರಿಂದ ಸ್ಕಾಚ್ ಪ್ರಶಸ್ತಿಯನ್ನು ವಿವಿಧ ಸಂಸ್ಥೆಗಳು ಸಾಧಿಸಿರುವ ಉತ್ತಮ ಆಡಳಿತ ನಿರ್ವಹಣೆ, ಹಣಕಾಸು,ತಾಂತ್ರಿಕತೆ ಅಳವಡಿಕೆ ಹಾಗೂ ಆಂತರಿಕ ಬೆಳವಣಿಗೆಗಾಗಿ ನೀಡುತ್ತಾ ಬಂದಿದೆ. ಸ್ಕಾಚ್ ಸಂಸ್ಥೆಯು ತನ್ನ ಅತ್ಯುನ್ನತ ಪ್ರಶಸ್ತಿಗಳನ್ನು ಸಂಸ್ಥೆಗಳು ಮಾಡಿರುವ ಅತಿ ಉತ್ತಮ ಸಾಧನೆ ಹಾಗೂ ಅವುಗಳಿಂದ ಉಂಟಾಗಿರುವ ಪರಿಣಾಮಗಳನ್ನು ಆಧರಿಸಿ ಆಯ್ಕೆ ಮಾಡಿ ಪ್ರಶಸ್ತಿ ನೀಡುತ್ತದೆ.
ಕೆಎಸ್‌ಆರ್‌ಟಿಸಿ ನಿಗಮವು, ಮಹಿಳೆಯರಿಗಾಗಿ ಜಾರಿಗೊಳಿಸಿರುವ ಉಚಿತ ಪ್ರಯಾಣದ ಶಕ್ತಿ ಯೋಜನೆ ಯ ಪರಿಣಾಮಕಾರಿ ಅನುಷ್ಠಾನಕ್ಕೆ ಹಾಗೂ ವಿನೂತನ ಕಾರ್ಮಿಕ ಕಲ್ಯಾಣ ಉಪಕ್ರಮಗಳಿಗೆ ೨೦೨೩ ನೇ ಸಾಲಿನ ೦೨ ಸ್ಕಾಚ್ ಪ್ರಶಸ್ತಿಗಳು ಲಭಿಸಿದ್ದು, ಪ್ರಶಸ್ತಿ ಪ್ರಧಾನ ಸಮಾರಂಭವು ಫೆ. ೧೦ ರಂದು ದೆಹಲಿಯ ಕಾನ್ಸ್ಟಿಟ್ಯುಷನ್ ಕ್ಲಬ್ ಆಫ್ ಇಂಡಿಯಾದಲ್ಲಿ ಜರುಗಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net