ಡಾ.ಚಂದ್ರಶೇಖರ ಕಂಬಾರರ ಪತ್ನಿ ಸತ್ಯಭಾಮ ಇನ್ನಿಲ್ಲ

Chandrasekhar Kambara wife Satyabhama
Published on

ಬೆಂಗಳೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಕವಿ ಡಾ.ಚಂದ್ರಶೇಖರ ಕಂಬಾರ ಅವರ ಪತ್ನಿ ಸತ್ಯಭಾಮ ಇಂದು(ಮಂಗಳವಾರ) ಬೆಳಗ್ಗೆ ನಿಧನರಾದರು. ಇವರಿಗೆ 76 ವರ್ಷ ವಯಸ್ಸಾಗಿತ್ತು.

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಸತ್ಯಭಾಮ ಅವರನ್ನು ಜ.3ರಂದು ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬೆಳಗ್ಗೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದರು. ಕತ್ರಿಗುಪ್ಪೆಯ ಸಿರಿ ಸಂಪಿಗೆ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಚಂದ್ರಶೇಖರ ಕಂಬಾರ ಅವರ ಜತೆ ಸತ್ಯಭಾಮಗೆ 1958ರಲ್ಲಿ ಮದುವೆ ನಿಶ್ಚಯವಾಗಿತ್ತು. ಆಗ ಸತ್ಯಭಾಮ ಅವರು 7ನೇ ತರಗತಿ ಓದುತ್ತಿದ್ದರು. ಇದಾದ 6 ವರ್ಷದ ನಂತರ ಅಂದರೆ 1964ರಲ್ಲಿ ಮದುವೆ ಆಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net