ಬೆಳ್ಳಂಬೆಳಗ್ಗೆ ಹಾಸನ, ಕೊಡಗು, ಮಂಡ್ಯ ಜಿಲ್ಲೆಯಲ್ಲಿ ಕಂಪಿಸಿದ ಭೂಮಿ

earthquake
Published on

ಬೆಂಗಳೂರು: ಹಾಸನ, ಕೊಡಗು, ಮಂಡ್ಯ ಜಿಲ್ಲೆಗಳ ಹಲವೆಡೆ ಭೂಮಿ ಕಂಪಿಸಿದ್ದು, ಜನ ಬೆಚ್ಚಿಬಿದ್ದಿದ್ದಾರೆ. ರಿಕ್ಟರ್​ ಮಾಪಕದಲ್ಲಿ 3.4ರಷ್ಟು ತೀವ್ರತೆ ದಾಖಲಾಗಿದೆ ಎಂದು ತಿಳಿದು ಬಂದಿದೆ.

ಹಾಸನ ತಾಲೂಕಿನ ಮಲ್ಲೆದೇವರಪುರ, ಕಾರ್ಲೆ ಅಂಕನಹಳ್ಳಿ ಗ್ರಾಮಗಳ ಸುತ್ತಮುತ್ತ, ಗುರುವಾರ ಬೆಳಗಿನಜಾವ 4.40ರ ಸುಮಾರಿನಲ್ಲಿ ಭೂಮಿ ನಡುಗಿದ ಅನುಭವವಾಗಿದೆ. ಗಾಬರಿಯಿಂದ ಜನ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಲಘು ಭೂಕಂಪನ ಆಗಿದೆ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣ ಪ್ರಾಧಿಕಾರದ ಅಧಿಕಾರಿಗಳು ದೃಢಪಡಿಸಿದ್ದಾರೆ. ಹಾಸನಕ್ಕೆ ಹೊಂದಿಕೊಂಡಂತಿರುವ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಗೌಡಳ್ಳಿ ಪಂಚಾಯಿತಿ, ನೇಗಳ್ಳಿ ಸೇರಿದಂತೆ ಹಲವೆಡೆಯೂ ಭೂಮಿ ಕಂಪಿಸಿದೆ.

ಮಂಡ್ಯ ಜಿಲ್ಲೆಯ ಕೆಲ ಹಳ್ಳಿಗಳಲ್ಲಿ ಭಾರೀ ಶಬ್ದ ಕೇಳಿಸುವ ಜತೆಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಕೆ.ಆರ್.ಪೇಟೆ ತಾಲೂಕಿನ ಮಾದಾಪುರ, ಗೊಂದಿಹಳ್ಳಿ, ಚಿನ್ನೇನಹಳ್ಳಿ ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲಿ ಭೂಮಿ ಕಂಪಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net