

ಧಾರವಾಡ: ಸ್ವಾತಂತ್ರ್ಯ ಬಂದಾಗಿನಿಂದ ಕಾಂಗ್ರೆಸ್ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದೆ. ಬಿಜೆಪಿ ಬಗ್ಗೆ ಮಾತನಾಡಲು ವಿಷಯ ಇಲ್ಲದಿದ್ದಾಗ ಆರ್ಎಸ್ಎಸ್ ಬಗ್ಗೆ ಮಾತನಾಡುತ್ತಾರೆ.
ಪದೇಪದೆ ಆರ್ಎಸ್ಎಸ್ ಬಗ್ಗೆ ಮಾತನಾಡುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಚಡ್ಡಿ ಹೋಗಿ ಪ್ಯಾಂಟ್ ಬಂದದ್ದು ಗೊತ್ತಿಲ್ಲ ಅನಿಸುತ್ತಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವ್ಯಂಗ್ಯವಾಡಿದರು.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಾಗೇಶ್, ಮಾತನಾಡಲು ಸಾಕಷ್ಟು ವಿಷಯಗಳಿವೆ. ಆದರೂ ಸಿದ್ದರಾಮಯ್ಯ ಅವರು ಆರ್ಎಸ್ಎಸ್ ಬಗ್ಗೆ ಯಾಕೆ ಮಾತನಾಡಬೇಕು? ಎಂದು ಪ್ರಶ್ನಿಸಿದರು. ಜನರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇಂತಹ ಸಮಯದಲ್ಲಿ ಸರ್ಕಾರಕ್ಕೆ ಸಲಹೆ ನೀಡಲಿ. ಬರೀ ಹಿಜಾಬ್ ಹಾಗೂ ಆರ್ಎಸ್ಎಸ್ ಬಗ್ಗೆ ಮಾತನಾಡುವುದನ್ನು ಬಿಡಬೇಕು ಎಂದರು.