ನಾಳೆ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟ: ಶಿಕ್ಷಣ ಸಚಿವ ನಾಗೇಶ್​

nagesh bc
Published on

ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾದ ದ್ವಿತೀಯ ಪಿಯುಸಿಯ ಫಲಿತಾಂಶ ನಾಳೆ (ಜೂ.18) ಪ್ರಕಟವಾಗಲಿದೆ. 2021-22ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಶನಿವಾರ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮೂಲಕ ತಿಳಿಸಿದ್ದಾರೆ.

ಮಲ್ಲೇಶ್ವರದಲ್ಲಿರುವ ಪದವಿ ಪೂವ ಶಿಕ್ಷಣ ಮಂಡಳಿ ಕಚೇರಿಯಲ್ಲಿ ಬೆಳಗ್ಗೆ 11 ಗಂಟೆಗೆ ಶಿಕ್ಷಣ ಸಚಿವರು ಸುದ್ದಿಗೋಷ್ಠಿ ನಡೆಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ http://www.karresults.nic.in/  ನಲ್ಲಿ ವಿದ್ಯಾರ್ಥಿಗಳು ಫಲಿತಾಂಶವನ್ನು ನೋಡಬಹುದು.

ಈ ಬಾರಿ ಪರೀಕ್ಷೆಗೆ 6,84,255 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. 1076 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. ಏ.22ರಿಂದ ಮೇ 18ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿತ್ತು. ಫಲಿತಾಂಶದ ಸಂದೇಶವು ಅಭ್ಯರ್ಥಿಗಳ ನೋಂದಣಿ ಮಾಡಿಕೊಂಡಿರುವ ಮೊಬೈಲ್​ಫೋನ್​ ಸಂಖ್ಯೆಗೂ ಬರಲಿದೆ. ಈ ಬಾರಿ ಪರೀಕ್ಷೆಗೆ ಗೈರು ಹಾಜರಾಗಿರುವವರ ಸಂಖ್ಯೆಯೂ ಹೆಚ್ಚಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net