ಮೇ 19ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ

bc nagesh
Published on

ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಮೇ 19ರಂದು ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.

ಶುಕ್ರವಾರ ಮಡಿಕೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಸಚಿವರು, ಮೇ 19ರಂದು ಫಲಿತಾಂಶ ಪ್ರಕಟವಾಗುತ್ತೆ. ಅದೇ ದಿ‌ನ ಶಾಲೆಗಳಲ್ಲಿ ಮತ್ತು ಇಲಾಖೆಯ ವೆಬ್​ಸೈಟ​ಲ್ಲಿ ಫಲಿತಾಂಶ ಪ್ರಕಟ ಆಗಲಿದೆ. ಮೇ 16ರಿಂದ ಶಾಲೆಗಳು ಓಪನ್​ ಆಗುತ್ತೆ ಎಂದರು. ಟ್ವೀಟ್​ ಮೂಲಕವೂ ಫಲಿತಾಂಶ ಪ್ರಕಟವಾಗುವ ದಿನಾಂಕ ಘೋಷಿಸಿದ್ದಾರೆ.

ರಾಜ್ಯದ 34 ಶೈಕ್ಷಣಿಕ ಜಿಲ್ಲೆಗಳ 3,444 ಕೇಂದ್ರಗಳಲ್ಲಿ ಮಾ.28ರಿಂದ ಏ.11ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆದಿತ್ತು. 34 ಶೈಕ್ಷಣಿಕ ಜಿಲ್ಲೆಗಳಲ್ಲಿ 234 ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆದಿದ್ದು, ಫಲಿತಾಂಶಕ್ಕಾಗಿ ವಿದ್ಯಾರ್ಥಿಗಳು ಮತ್ತು ಪಾಲಕರು ಎದುರು ನೋಡುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net