ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಮಂಡಿಸಿದ ಚೊಚ್ಚಲ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಒಟ್ಟು 31,980 ಕೋಟಿ ರೂ. ಅನುದಾನ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ.
ನೀಟ್ ಪರೀಕ್ಷೆ ಎದುರಿಸಲು ಬಡಮಕ್ಕಳಿಗೆ ಎಲ್ಲ ತಾಲೂಕು ಕೇಂದ್ರಗಳಲ್ಲಿ ತರಬೇತಿ
30 ಸರ್ಕಾರಿ ಐಟಿಐಗಳು ಹಾಗೂ ಆಯ್ದ ಪಾಲಿಟೆಕ್ನಿಕ್ಗಳನ್ನು ಪಿಪಿಪಿ ಮಾದರಿಯಲ್ಲಿ ಮೇಲ್ದರ್ಜೆಗೇರಿಸುವುದು
ಮುಖ್ಯಮಂತ್ರಿ ವಿದ್ಯಾರ್ಥಿ ಮಾರ್ಗದರ್ಶಿನಿ ಯೋಜನೆಯಡಿಯಲ್ಲಿ ನೀಟ್, ಜೆಇಇ, ಕೆಪಿಎಸ್ಸಿ, ಯುಪಿಎಸ್ಸಿ, ಎಸ್ಎಸ್ಸಿ, ಬ್ಯಾಂಕಿಂಗ್, ರೈಲ್ವೆ, ಸಿಡಿಎಸ್ ಪರೀಕ್ಷಾ ಆಕಾಂಕ್ಷಿಗಳಿಗೆ ಆನ್ಲೈನ್ ಮೂಲಕ ಉಚಿತ ಕೋಚಿಂಗ್
ಹಿಂದುಳಿದ ವರ್ಗಗಳ ಯುವ ಜನರಿಗೆ ಐಟಿಐ, ಜಿಟಿಟಿಸಿ, ಕೆಜಿಟಿಟಿಐಗಳಲ್ಲಿ ಅಲ್ಪಾವಧಿ ಕೋರ್ಸ್ಗಳ ಮೂಲಕ ಕೌಶಲ ತರಬೇತಿ ನೀಡಲು "ಅಮೃತ ಮುನ್ನಡೆ' ಯೋಜನೆ ಜಾರಿ
ಸರ್ಕಾರಿ ಶಾಲೆಗಳ ಮೂಲ ಸೌಕರ್ಯ ಅಭಿವೃದ್ಧಿಗೆ 500 ಕೋಟಿ ರೂ.
ರಾಜ್ಯದ 7 ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳನ್ನು 'ಕನಾಟಕ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ'ಯನ್ನಾಗಿ ಮೇಲ್ದರ್ಜೆಗೆ
ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ 15 ಸಾವಿರ ಶಿಕ್ಷಕ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ 27 ಸಾವಿರ ಅತಿಥಿ ಶಿಕ್ಷಕರ ನೇಮಕ
ಚಾಮರಾಜನಗರ, ಬೀದರ್, ಹಾವೇರಿ, ಕೊಡಗು, ಕೊಪ್ಪಳ, ಬಾಗಲಕೋಟೆ ಹಾಗೂ ಹಾಸನದಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ವಿವಿ ಸ್ಥಾಪನೆ
200ಕ್ಕೂ ಅಧಿಕ ಒಳರೋಗಿ ಸಾಮರ್ಥ್ಯವಿರುವ ಜಿಲ್ಲಾಸ್ಪತ್ರೆಗಳಲ್ಲಿ ಬೋಧನಾ ಆಸ್ಪತ್ರೆಗಳಾಗಿ ರೂಪಿಸುವುದು. ಈ ವರ್ಷ ತುಮಕೂರುಜಿಲ್ಲಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಪಿಜಿ ಕೋರ್ಸ್ ಆರಂಭ
ಹಾವೇರಿ ಜಿಲ್ಲೆ ಸವಣೂರಿನಲ್ಲಿ ಹೊಸ ಆಯುರ್ವೇದ ಕಾಲೇಜು ಸ್ಥಾಪನೆ
ಚಿತ್ರದುರ್ಗದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ
ರಾಮನಗರದ ಅರ್ಚಕರಹಳ್ಳಿ ಗ್ರಾಮದಲ್ಲಿ ಉದ್ದೇಶಿತ ಆರೋಗ್ಯ ವಿವಿಯ ಕ್ಯಾಂಪಸ್ ಸ್ಥಾಪನೆಗೆ 600 ಕೋಟಿ ರೂ. ಅನುದಾನ
169 ಸರ್ಕಾರಿ ಬಾಲಕಿಯರ ಪ್ರೌಢಶಾಲೆಗಳಿಗೆ ಧಾರವಾಡ ಪ್ರಾದೇಶಿಕ ವಿಜ್ಞಾನ ಕೇಂದ್ರ ತಯಾರಿಸಿದ 'ಲ್ಯಾಬ್ ಇನ್ ಎ ಕಿಟ್' ವಿತರಣೆ
ಬೆಂಗಳೂರಲ್ಲಿ ಆಯ್ದ 20 ಶಾಲೆಗಳನ್ನು ಬೆಂಗಳೂರು ಪಬ್ಲಿಕ್ ಶಾಲೆಗಳಾಗಿ ಅಭಿವೃದ್ಧಿ
ಸಾವಿತ್ರಿಬಾಯಿ ಫುಲೆ ಹೆಸರಲ್ಲಿ ರಾಜ್ಯಮಟ್ಟದ ಆದರ್ಶ ಶಿಕ್ಷಕ/ಶಿಕ್ಷಕಿ ಪ್ರಶಸ್ತಿ
ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಡಿ ನಡೆಯುತ್ತಿರುವ ವಸತಿ ಶಾಲೆಗಳಿಗೆ 'ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ' ಎಂದು ಮರು ನಾಮಕರಣ
ಮಂಗಳೂರು ವಿವಿಯಲ್ಲಿ ಅರೆಭಾಷೆ ಸಂಶೋಧನಾ ಕೇಂದ್ರ ಸ್ಥಾಪನೆ
ಶಿವಮೊಗ್ಗದಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ಕ್ರೀಡಾ ಅಕಾಡೆಮಿ ಸ್ಥಾಪನೆ