

ಮಂಗಳೂರು: ವಿದ್ಯುತ್ಚಾಲಿತ ದ್ವಿಚಕ್ರ ವಾಹನಗಳ (ಇ.ವಿ.) ಬ್ಯಾಟರಿಗಳು ಸ್ಫೋಟ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ದೇಶದ ವಿವಿಧ ಭಾಗಗಳಲ್ಲಿ ಈಗಾಗಲೇ ಹಲವರ ಜೀವಹಾನಿಯೂ ಆಗಿದೆ. ಇದೀಗ ಮಂಗಳೂರು ನಗರದ ಬೋಂದೆಲ್ ಕೆಎಚ್ಬಿ ಕಾಲನಿಯಲ್ಲಿ ಭಾನುವಾರ ಮಧ್ಯಾಹ್ನ ಚಾರ್ಜ್ಗೆ ಇಟ್ಟಿದ್ದ ಇಲೆಕ್ಟ್ರಿಕ್ ಸ್ಕೂಟರ್ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾಗಿದೆ.
ಸ್ಕೂಟರನ್ನು ಮಾಲೀಕ ಜಯರಾಮ ಎಂಬುವರು ಮನೆ ಪಾರ್ಕಿಂಗ್ ಜಾಗದಲ್ಲಿ ಚಾರ್ಜ್ಗೆ ಇಟ್ಟಿದ್ದರು. ಕೆಲವೇ ಗಂಟೆಯಲ್ಲಿ ಬೆಂಕಿ ಕಾಣಿಸಿಕೊಂಡು, ಸ್ಕೂಟರ್ ಸ್ಫೋಟಗೊಂಡಿದೆ. ಯಂತ್ರಗಳು, ಬಿಡಿಭಾಗಗಳು ಸೇರಿದಂತೆ ಸಂಪೂರ್ಣ ಸ್ಕೂಟರ್ ಸುಟ್ಟಿದೆ. ಕದ್ರಿ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸಿದೆ. ಕಾವೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಇಲೆಕ್ಟ್ರಿಕ್ ಸ್ಕೂಟರ್ಗಳು ಬೆಂಕಿಗಾಹುತಿ ಆಗುತ್ತಿರುವುದು ಮಾಲೀಕರಲ್ಲಿ ಆತಂಕ ಹುಟ್ಟುಹಾಕಿದೆ.