ಸ್ನೇಹಿತನ ಬರ್ತ್ ಡೇ ಪಾರ್ಟಿಗೆ ಬಂದಿದ್ದ ಇಂಜಿನಿಯರಿಂಗ್​ ವಿದ್ಯಾರ್ಥಿಗಳಿಬ್ಬರ ಪ್ರಾಣ ಹೊತ್ತೊಯ್ದ ಜವರಾಯ!

death
Published on

ಮೈಸೂರು: ಸ್ನೇಹಿತನ ಬರ್ತ್ ಡೇ ಪಾರ್ಟಿಗೆಂದು ತಿ.ನರಸೀಪುರ ತಾಲೂಕಿನ ತಡಿಮಾಲಂಗಿ ಗ್ರಾಮಕ್ಕೆ ಬಂದಿದ್ದ ಇಂಜಿನಿಯರಿಂಗ್​ ವಿದ್ಯಾರ್ಥಿಗಳಿಬ್ಬರು ದುರಂತ ಅಂತ್ಯಕಂಡಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

ಅಭಿಷೇಕ್ (21) ಮತ್ತು ಅಂಕೇಶ್ (21) ಮೃತ ದುರ್ದೈವಿಗಳು. ಮೂಲತಃ ಯಳಂದೂರು ತಾಲೂಕಿನ ಕಿನಕಹಳ್ಳಿ ಗ್ರಾಮದ ನಿವಾಸಿಗಳಾದ ಯುವಕರಿಬ್ಬರೂ ಚಾಮರಾಜನಗರದ ಸರ್ಕಾರಿ ಇಂಜಿನಿಯರ್ ಕಾಲೇಜಿನಲ್ಲಿ ಓದುತ್ತಿದ್ದರು.

ಸ್ನೇಹಿತನ ಹುಟ್ಟಹಬ್ಬ ಆಚರಿಸಲೆಂದು ಇವರಿಬ್ಬರೂ ತಡಿಮಾಲಂಗಿ ಗ್ರಾಮಕ್ಕೆ ಆಗಮಿಸಿದ್ದರು. ಈ ವೇಳೆ ನದಿಯಲ್ಲಿ ಈಜಲು ಹೋಗಿದ್ದ ಅಭಿಷೇಕ್ ಮತ್ತು ಅಂಕೇಶ್ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಮೃತದೇಹಗಳನ್ನು ಹೊರ ತೆಗೆದಿದ್ದಾರೆ. ತಲಕಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net